ಬೆಂಗಳೂರು: ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ನಿತ್ಯ ಬಳಕೆಯ ಹಾಲಿನ ದರವನ್ನು ಲೀಟರ್ಗೆ 2 ರೂಪಾಯಿ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳಿ ಕೆಎಂಎಫ್ (KMF) ಮಹತ್ವದ ನಿರ್ಧಾರ ಪ್ರಕಟಿಸಿದೆ.
ಈ ಕುರಿತು ಬೆಂಗಳೂರಿನ ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.
ಪ್ರತಿ ಲೀಟರ್ ನಂದಿನಿ ಹಾಲಿನ ಪ್ಯಾಕೆಟ್ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ 42 ರೂಪಾಯಿ ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ಭೀಮಾನಾಯ್ಕ್ ತಿಳಿಸಿದರು.
ಇದನ್ನೂ ಓದಿ: ಉಮಾಪತಿ ಹಾಗು ಪ್ರಥಮ್ಗೆ ಬೆದರಿಕೆ ಹಾಕಿದ್ದ ದರ್ಶನ್ ಅಂದಾಭಿಮಾನಿ ಅರೆಸ್ಟ್: ಕ್ಷಮೆ ಕೋರಿದ ವೀಡಿಯೋ ವೈರಲ್
ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್ನಲ್ಲಿ ಅಮುಲ್ ಒಂದು ಲೀಟರ್ಗೆ 56 ರೂ. ಮಹಾರಾಷ್ಟ್ರದಲ್ಲಿ 56 ರೂ. ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಎಂದು ಭೀಮಾನಾಯ್ಕ್ ಹೇಳಿದರು.
ಕೆಎಂಎಫ್ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.