ಬೆಂಗಳೂರು: ಸಲಿಂಗ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್, ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಇಂದು (ಜುಲೈ 03) ಸೂರಜ್ ರೇವಣ್ಣಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಸೂರಜ್ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಈಗಾಗಲೇ ಅವರ ಸಹೋದರ ಪ್ರಜ್ವಲ್ ಸಹ ಇದೇ ಜೈಲಿನಲ್ಲಿದ್ದಾರೆ.
ಇದನ್ನೂ ಓದಿ: ಮಗ ಪ್ರಜ್ವಲ್ನನ್ನು ಭೇಟಿಯಾಗಲು ಪರಪ್ಪನ ಅಗ್ರಹಾರಕ್ಕೆ ಬಂದ ರೇವಣ್ಣ
ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಪೊಲೀಸರು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದಾಗ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದರು. ಬಳಿಕ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ಆರೋಪಿ ಸೂರಜ್ ರೇವಣ್ಣನನ್ನು ತಮ್ಮವಶಕ್ಕೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಕೋರ್ಟ್, ನ್ಯಾಯಾಂಗ ಬಂಧನದಲ್ಲಿದ್ದ ಸೂರಜ್ ರೇವಣ್ಣನನ್ನು ಜುಲೈ 03ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿತ್ತು. ಅದರಂತೆ ಇಂದು ಕಸ್ಟಡಿ ಮುಗಿದಿದ್ದರಿಂದ ಸೂರಜ್ನನ್ನು ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದು, ಇದೀಗ ಕೋರ್ಟ್ ಜುಲೈ 18ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.