ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿ ಮುಖ್ಯ ರಸ್ತೆಯಲ್ಲಿರುವ ಮನೆಯಲ್ಲಿ ನಡೆದಿದೆ.
ಪೂಜಾ (22)ವರ್ಷ, ನೇಣಿಗೆ ಶರಣಾದ ನತದೃಷ್ಟೆ, ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗ ಕತ್ತರಿಸಿದ ವೈದ್ಯ!
ಮೂಲತಃ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ತೆಗ್ಗಿ ಬಸಾಪುರ ಮೂಲದ ಪೂಜಾಳನ್ನು 2022 ರಲ್ಲಿ ಸುನೀಲ್ ಎಂಬುವವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು, ಮನೆಯಲ್ಲಿ ವರದಕ್ಷಿಣೆ ಕಿರುಕುಳ ಹೆಚ್ಚಿದ ಹಿನ್ನೆಲೆ ಮನನೊಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಮೃತಳ ಪೋಷಕರು, ಪೂಜಾ ಪತಿ ಸುನೀಲ್ ಹಾಗು ಮೈದುನನ ವಿರುದ್ದ ಆರೋಪ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಗಂಗಮ್ಮನಗುಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದಾರೆ.