ಬೆಂಗಳೂರು; ಮುಂದೂಡಿಕೆಯಾಗಿದ್ದ ನೀಟ್ ಪಿಜಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 11 ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಎನ್ಬಿಇಎಂಎಸ್ ಪ್ರಕಟಣೆ ತಿಳಿಸಿದೆ. ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ, ಸ್ನಾತಕೋತ್ತರ ಪರೀಕ್ಷೆಯ ಹೊಸ ದಿನಾಂಕವನ್ನು ಪ್ರಕಟಿಸಿದೆ.
ಮೇ 5ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಬೆಳಕಿಗೆ ಬಂದಿತ್ತು. ಈ ವಿವಾದದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 23ರಂದು ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಮುಂದೂಡಿತ್ತು.
ಇದನ್ನು ಓದಿ; T20 ಕ್ರಿಕೆಟ್ ಗೆ ವಿದಾಯ ಘೋಷಿಸಿದ ಬೆನ್ನಲ್ಲೇ ಲಂಡನ್ನಲ್ಲಿ ಶಾಶ್ವತ ನೆಲಸಲು ಕೊಹ್ಲಿ ತಯಾರಿ!
ಇದೀಗ ನೀಟ್ ಪಿಜಿ ಪರೀಕ್ಷೆಗೆ ಹೊಸ ದಿನಾಂಕ ಘೋಷಿಸಿದ್ದು, ಆಗಸ್ಟ್ 11 ರಂದು ಎರಡು ಪಾಳಿಯಲ್ಲಿ ನಡೆಯಲಿದೆ. ದೇಶಾದ್ಯಂತ ಸುಮಾರು 52,000 ಸ್ನಾತಕೋತ್ತರ ಸೀಟುಗಳಿಗೆ ಪ್ರತಿ ವರ್ಷ ಸುಮಾರು ಎರಡು ಲಕ್ಷ ಎಂಬಿಬಿಎಸ್ ಪದವೀಧರರು ನೀಟ್ ಪಿಜಿ ಪರೀಕ್ಷೆ ಬರೆಯುತ್ತಾರೆ.