ಆಗಸ್ಟ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪತನವಾಗಲಿದೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಯಾದವ್ ಭವಿಷ್ಯ ನುಡಿದಿದ್ದಾರೆ. ಪಾಟ್ನಾದಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯವೈಖರಿ ಬಗ್ಗೆ ಸಂತಸ ವ್ಯಕ್ತಪಡಿಸಿದ್ರು. ಪಕ್ಷ ಇನ್ನಷ್ಟು ಎತ್ತರಕ್ಕೆ ಬೆಳೆಯುವ ವಿಶ್ವಾಸವಿದೆ ಎಂದರು. ಜೊತೆಗೆ ಕೇಂದ್ರದ ಮೋದಿ ಸರ್ಕಾರ ಅತ್ಯಂತ ದುರ್ಬಲವಾಗಿದ್ದು, ಆಗಸ್ಟ್ನಲ್ಲಿ ಮೋದಿ ಸರ್ಕಾರ ಪತನವಾಗಲಿದೆ ಎಂದು ಬಾಂಬ್ ಸಿಡಿಸಿದ್ದಾರೆ.
ಬಿಹಾರ ವಿಧಾನಸಭೆಯಲ್ಲಿ ಆರ್ಜೆಡಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮೊದಲು ನಾವು ಜನತಾದಳದ ಭಾಗವಾಗಿದ್ದೆವು. ಈಗ ನಾವು ಬೇರ್ಪಟ್ಟಿದ್ದೇವೆ. ನಮ್ಮ ಪಕ್ಷ ಅಪ್ಪನ ಪಕ್ಷ. ಆರ್ಜೆಡಿ ಮತಗಳಲ್ಲಿ 9%ರಷ್ಟು ಏರಿಕೆ ದಾಖಲಾಗಿದ್ದರೆ, ಎನ್ಡಿಎ ಪಾಲು ಕಡಿಮೆಯಾಗಿದೆ ಎಂದರು.
ಇದನ್ನೂ ಓದಿ; T20 ಕ್ರಿಕೆಟ್ ಗೆ ವಿದಾಯ ಘೋಷಿಸಿದ ಬೆನ್ನಲ್ಲೇ ಲಂಡನ್ನಲ್ಲಿ ಶಾಶ್ವತ ನೆಲಸಲು ಕೊಹ್ಲಿ ತಯಾರಿ!
ನಮ್ಮ ಪಕ್ಷಕ್ಕೆ ಒಳ್ಳೆಯ ಮತ್ತು ಕೆಟ್ಟ ಸಮಯಗಳು ಇದ್ದವು. ನಮ್ಮ ಸಿದ್ಧಾಂತದಲ್ಲಿ ನಾವು ಎಂದಿಗೂ ರಾಜಿ ಮಾಡಿಕೊಂಡಿಲ್ಲ. ನಮ್ಮ ಹೋರಾಟವನ್ನು ಮುಂದುವರಿಸಿದೆವು. ಕೆಲವೊಮ್ಮೆ ನಾವು ಯಶಸ್ವಿಯಾಗಿದ್ದೇವೆ ಮತ್ತು ಕೆಲವೊಮ್ಮೆ ನಾವು ವಿಫಲರಾಗಿದ್ದೇವೆ. ಆದರೆ ನಮ್ಮ ಕಾರ್ಯಕರ್ತರು ದೃಢವಾಗಿ ಉಳಿದರು ಎಂದು ಹೇಳಿದ್ದಾರೆ.