Saturday, October 5, 2024

ಡೆಂಗ್ಯೂ ಜ್ವರಕ್ಕೆ ನಿಖರವಾದ ಚಿಕಿತ್ಸೆ ಇಲ್ಲ: ಸಂಸದ ಸಿ.ಎನ್​ ಡಾ.ಮಂಜುನಾಥ್​

ಬೆಂಗಳೂರು: ಡೆಂಗ್ಯೂ ಫೀವರ್​ಗೆ ನಿಖರವಾದ ಯಾವುದೇ ಚಿಕಿತ್ಸೆ ಇಲ್ಲ ಆದರೇ, ಸೊಳ್ಳೆಗಳ ನಿಯಂತ್ರಣವೇ ಇದಕ್ಕೆ ಚಿಕಿತ್ಸೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಮಂಜುನಾಥ್​ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಳೆಗಾಲದ ಆರಂಭದ ಸಂದರ್ಭದಲ್ಲಿ ಡೆಂಗ್ಯೂ ಸೊಳ್ಳೆಗಳ ಕಾಟ ಹೆಚ್ಚಾಗುತ್ತದೆ. ಇದಕ್ಕೆ ಸಂಬಂಧಿಸಿದ ಸೊಳ್ಳೆಗಳ ನಿಯಂತ್ರಣ ಮಾಡದೇ ಹೋದಲ್ಲಿ ಇನ್ನು ಗಂಭೀರ ಸ್ವರೂಪದ  ಚಿಕುನ್​ ಗುನ್ಯ, ಜೀಕಾ ವೈರಸ್​ಗಳಂಥ ಕಾಯಿಲೆಗಳು ಬರಬಹುದು ಇವೆಲ್ಲಾ ಮಾರಕವಾದಂತ ಖಾಯಿಲೆಗಳು ಎಂದರು.

ಇದನ್ನೂ ಓದಿ: ಡಾ.ಬಾಬು ಜಗಜೀವನ ರಾಂ ದೇಶದ ಜನರಿಗೆ ಆಹಾರ ಭದ್ರತೆ ಒದಗಿಸಿದವರು: ಸಿಎಂ ಸಿದ್ದರಾಮಯ್ಯ

ಡೆಂಗ್ಯೂ ಬಂದು ಮತ್ತೆ ಹುಷಾರಾಗುವ ವೇಳೆಗಾಗಲೇ ಪ್ಲೇಟ್ ಲೆಟ್ಸ್ ಕಡಿಮೆಯಾಗುತ್ತದೆ, ಜೊತೆಗೆ ದೇಹದಲ್ಲಿ ನೀರು ತುಂಬಿಕೊಳ್ಳುತ್ತದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರ‌ ಗಮನಕ್ಕೂ ನಾನು ತರಲಿದ್ದೇನೆ. ಅವಶ್ಯಕತೆ ಇರುವವರಿಗೆ ಮೊದಲೇ ಚಿಕಿತ್ಸೆ ನೀಡಬೇಕು. ಡೆಂಗ್ಯೂ ಕಾಯಿಲೆಗೆ ಬೇಕಾದ ಮಾತ್ರೆಗಳ ಕೊರತೆ ಕೂಡ ಎದುರಾಗಿದೆ. ರೋಗಿಗಳನ್ನು ವಾರ್ ರೂಮ್ ಮೂಲಕ ಮಾನಿಟರ್ ಮಾಡಬೇಕು. ಮುಂದುವರೆದ ದೇಶಗಳಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಕಾಯಿಲೆ ತಡೆದಿದ್ದಾರೆ. ಮಸ್ಕ್ಯೂಟೋ ರೆಫಲೆಂಟ್ಸ್ ಅಂತ ಸ್ಟಿಕರ್ ಬರಲಿದೆ. ಅದನ್ನ ಇಲ್ಲೂ ಹಾಕಬೇಕು. ಇದರಿಂದ ಮಕ್ಕಳಿಗೆ ಸೊಳ್ಳೆ ಕಡಿಯೋದ್ರಿಂದ ತಪ್ಪಿಸಬಹುದು ಎಂದು ಸಲಹೆ ನೀಡಿದರು.

ಈಗಾಗಲೇ ಜಪಾನ್, ಸಿಂಗಾಪುರ್, ಅಮೇರಿಕಾದಲ್ಲಿ ಡೆಂಗ್ಯೂ ಕಾಯಿಲೆಗೆ ಬೇಕಾದ ಮೆಡಿಸಿನ್ ಇದೆ. ಅವುಗಳನ್ನ ರಾಜ್ಯ ಸರ್ಕಾರ ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸ್ವಚ್ಚತೆ ಕಾರ್ಯ ಎಲ್ಲೆಡೆ ಅರ್ಧಕ್ಕೆ ಕಾಮಗಾರಿ ನಿಂತಿದೆ. ಅದನ್ನ ಪೂರ್ಣಗೊಳಿಸಬೇಕು. ಇಲ್ಲ ಅಲ್ಲಿ ನೀರು ನಿಲ್ಲೋದನ್ನ ತಡೆಗಟ್ಟಬೇಕು. ಸೊಳ್ಳೆ ನಿಯಂತ್ರಣ ಮಾಡಲು ಸ್ಪ್ರೇ ಮಾಡುವವರು ಕಾಣುತ್ತಿಲ್ಲ. ಬಿಬಿಎಂಪಿ ಎಚ್ಚೆತ್ತುಕೊಳ್ಳಬೇಕು ಎಂದು ಅವರು ತಿಳಿಸಿದರು.

RELATED ARTICLES

Related Articles

TRENDING ARTICLES