Friday, September 20, 2024

ಅಸ್ಸಾಂನಲ್ಲಿ ಮುಂದುವರೆದ ಮಳೆ; 52 ಮಂದಿ ಬಲಿ

ದಿಸ್ಪುರ: ದೇಶದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಇನ್ನು ಕರ್ನಾಟಕದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಇತ್ತ ಉತ್ತರ ಭಾರತದಲ್ಲಿಯೂ ಪ್ರವಾಹ ಸಂಕಷ್ಟ ಎದುರಾಗಿದ್ದು, ಅದರಲ್ಲಿಯೂ ಅಸ್ಸಾಂನಲ್ಲಿ ಮಳೆಯಿಂದಾಗಿ ಕಳೆದ 24 ಗಂಟೆಗಳಲ್ಲಿ ಸುಮಾರು 52 ಮಂದಿ ಮೃತಪಟ್ಟಿದ್ದಾರೆ..

ಇದನ್ನು ಓದಿ: ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; NEET UG ಕೌನ್ಸೆಲಿಂಗ್ ಮುಂದೂಡಿಕೆ

ಅಲ್ಲದೇ ಭಾರೀ ಮಳೆಯಿಂದಾಗಿ ನೂರಾರು ಮಂದಿ ಮನೆ ಕಳೆದುಕೊಂಡಿದ್ದಾರೆ. ನೆರೆಯಿಂದಾಗಿ ಅಂದಾಜು 24 ಲಕ್ಷ ಮಂದಿ ತೊಂದರೆಗೆ ಒಳಗಾಗಿದ್ದಾರೆ. ರಾಜ್ಯದ ಮುಕ್ಕಾಲು ಭಾಗಗಳಲ್ಲಿ ನೆರೆ ಆವರಿಸಿದೆ. ರಾಜ್ಯದ 35 ಜಿಲ್ಲೆಗಳ ಪೈಕಿ 30 ಜಿಲ್ಲೆಗಳು ತೀವ್ರವಾಗಿ ಪ್ರವಾಹದ ಹೊಡೆತಕ್ಕೆ ಸಿಕ್ಕಿಕೊಂಡಿವೆ..

ಅಸ್ಸಾಂನ ಬಾರ್ಪೇಟಾ ಜಿಲ್ಲೆ ಪ್ರವಾಹದಿಂದ ಅತಿ ಹೆಚ್ಚು ಹಾನಿಗೊಳಗಾಗಿದ್ದು, ಸುಮಾರು 1,40,000 ಜನರ ಮೇಲೆ ಪ್ರಭಾವ ಬೀರಿದೆ. ಇಲ್ಲಿನ ಸುಮಾರು 179 ಗ್ರಾಮಗಳು ಮುಳುಗಿವೆ ಮತ್ತು ಸುಮಾರು 1,571.5 ಹೆಕ್ಟೇರ್ ಬೆಳೆ ನಾಶವಾಗಿದೆ. ಧುಬ್ರಿ ಜಿಲ್ಲೆಯಲ್ಲಿಯೂ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಇಲ್ಲಿ 775,721 ಜನರು ಬಾಧಿತರಾಗಿದ್ದು, ಪ್ರವಾಹದಿಂದ 63,490.97 ಹೆಕ್ಟೇರ್ ಬೆಳೆ ಮುಳುಗಿದೆ. 3,518 ಗ್ರಾಮಗಳು ಸಂಕಷ್ಟಕ್ಕೆ ಸಿಲುಕಿವೆ. ಇನ್ನು ಎಡಬಿಡದೇ ಅಸ್ಸಾಂನಲ್ಲಿ ಧಾರಕಾರ ಮಳೆಯಾಗುತ್ತಿದ್ದು, ಭಾರೀ ಮಳೆ ಹಿನ್ನಲೆ ಜನರು ಎಚ್ಚರಿಕೆವಹಿಸುವಂತೆ ಅಧಿಕಾರಿಗಳ ಸೂಚಿಸಿದ್ದಾರೆ..

RELATED ARTICLES

Related Articles

TRENDING ARTICLES