ಧಾರವಾಡ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ ನವನಗರ ಎಪಿಎಂಸಿಯಲ್ಲಿ ನಡೆದಿದೆ.
ಧಾರವಾಡ ನವನಗರ ಎಪಿಎಂಸಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಅಮರಗೋಳ ನಿವಾಸಿ ಖಲಂದರ್ (45) ಎಂಬುವವರ ಕಾಲಿಗೆ ಬಲವಾದ ಪೆಟ್ಟು ಬಿದ್ದು ಎರಡು ಕಾಲಿನ ಮೂಳೆ ಮುರಿದಿವೆ ಎಂದು ತಿಳಿದು ಬಂದಿದೆ. ಟಾಟಾ ಏಸ್ ಚಾಲಕನ ಅತಿ ವೇಗವೇ ಈ ಘಟನೆಗೆ ಕಾರಣವೆಂಬುದನ್ನು ಸ್ಥಳೀಯರಿಂದ ಆರೋಪಿಸಿದ್ದಾರೆ.
ಇದನ್ನೂ ಓದಿ: ಮೊಬೈಲ್ ಚಾರ್ಜಿಂಗ್ ಮಾಡುವಾಗ ವಿದ್ಯುತ್ ಶಾಕ್: ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಗಂಭೀರವಾಗಿ ಗಾಯಗೊಂಡ ಖಲಂದರನನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ನವನಗರ ಎಪಿಎಂಸಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.