‘ಕಲ್ಕಿ 2898 ಎಡಿ’ ಸಿನಿಮಾ 2ನೇ ವಾರವೂ ಭರ್ಜರಿ ಗಳಿಕೆ ಮಾಡಿದೆ. ಕಲ್ಕಿ ವಿಶ್ವ ಬಾಕ್ಸ್ ಆಫೀಸ್ನಲ್ಲೂ ಮಿಂಚುತ್ತಿದೆ. ಅಮೆರಿಕ, ಆಸ್ಟ್ರೇಲಿಯಾ ಮೊದಲಾದ ಕಡೆಗಳಲ್ಲಿ ಸಿನಿಮಾ ಮೆಚ್ಚುಗೆ ಪಡೆಯುತ್ತಿದೆ. ಈ ಚಿತ್ರ ವಿಶ್ವಾದ್ಯಂತ 800 ಕೋಟಿ ರೂಪಾಯಿ ಗಳಿಸಿದೆ. ಶೀಘ್ರವೇ ಚಿತ್ರ 1000 ಕೋಟಿ ರೂಪಾಯಿ ಕ್ಲಬ್ ಸೇರುವ ಸಾಧ್ಯತೆ ಇದೆ. ಕೇವಲ 11 ದಿನಕ್ಕೆ ಈ ಸಿನಿಮಾ ಇಷ್ಟು ದೊಡ್ಡ ಮೊತ್ತದ ಕಲೆಕ್ಷನ್ ಮಾಡಿದೆ. ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಭ್ ಬಚ್ಚನ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.
ಇದನ್ನು ಓದಿ: ಹರ್ಯಾಣದ ಬಳಿ ಬಸ್ ಪಲ್ಟಿ; 40 ಮಕ್ಕಳಿಗೆ ಗಂಭೀರ ಗಾಯ
ಎರಡನೇ ಭಾನುವಾರ ಈ ಸಿನಿಮಾ ಭಾರತದಲ್ಲಿ 41 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಕಲೆಕ್ಷನ್ 506.87 ಕೋಟಿ ರೂಪಾಯಿ ಆಗಿದೆ. ಶೀಘ್ರವೇ ಈ ಚಿತ್ರ ‘ಬಾಹುಬಲಿ 2’, ‘ಪಠಾಣ್’ ಚಿತ್ರಗಳ ಗಳಿಕೆಯನ್ನು ಹಿಂದಿಕ್ಕುವ ಸಾಧ್ಯತೆ ಇದೆ. ಎರಡನೇ ವೀಕೆಂಡ್ನಲ್ಲೂ ಸಿನಿಮಾ ಇಷ್ಟೊಂದು ಉತ್ತಮ ಗಳಿಕೆ ಮಾಡಿರೋದು ವಿಶೇಷ.
ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2ಡಿ ಜೊತೆಗೆ 3ಡಿಯಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ ಎನ್ನಲಾಗಿದೆ. ಈ ಕಾರಣದಿಂದಲೇ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡೋ ಅವಶ್ಯಕತೆ ಇತ್ತು. ಸದ್ಯ ಆಗಿರೋ ಗಳಿಕೆಯಿಂದ ನಿರ್ಮಾಪಕರಿಗೆ ಇನ್ನೂ ದೊಡ್ಡ ಲಾಭವೇನು ಆಗಿಲ್ಲ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.