ಕಲಬುರಗಿ; ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದಲ್ಲಿ ಇಂದು ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಮೃತಪಟ್ಟಿದ್ದಾರೆ. ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ವಿಧಿವಶರಾಗಿದ್ದಾರೆ.
ಇದನ್ನೂ ಓದಿ: ಜಾರ್ಖಂಡ್ನಲ್ಲಿ 2 ಅಂತಸ್ತಿನ ಕಟ್ಟಡ ಕುಸಿತ; ಮೂವರು ಸಾವು
ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ರಟಕಲ್ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಶಾಸಕ ಬಿಆರ್ ಪಾಟೀಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.