Sunday, October 6, 2024

ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ: ಈಶ್ವರಪ್ಪ

ಶಿವಮೊಗ್ಗ: ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ. ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ ಎಂದು ಮಾಜಿ ಸಚಿವ ಕೆಎಸ್​. ಈಶ್ವರಪ್ಪ ಹೇಳಿದ್ದಾರೆ. ತುಂಗಾ ನದಿಗೆ ಬಾಗಿನ ಅರ್ಪಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇನ್ನು ನಿರ್ಧಾರ ಕೈಗೊಂಡಿಲ್ಲ. ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ ನ್ಯಾಯ ಸಿಗಲಿ. ಅಪ್ಪ-ಮಕ್ಕಳ ಕೈಯಲ್ಲಿ ಬಿಜೆಪಿ ಇರುವುದು ತಪ್ಪು. ಈ ಕಾರಣಕ್ಕೆ ನಾನು ಚುನಾವಣೆಗೆ ಸ್ಪರ್ಧೆ ಮಾಡಿದ್ದೆ ಎಂದು ಹೇಳಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿಕ್ಕಿ ಬಿದ್ದಿದ್ದಾರೆ. ಮನೆಯಲ್ಲಿದ್ದ ಹೆಣ್ಣು ಮಕ್ಕಳನ್ನು ಬೀದಿಗೆ ತಂದಿದ್ದಾರೆ. ಈ ಹಗರಣದಲ್ಲಿ ಸಿಎಂ ಕುಟುಂಬದವರು ಭಾಗಿಯಾಗಿದ್ದಾರೆ. ಮುಡಾ ಅಕ್ರಮ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಥಾಣೆಯಲ್ಲಿ ಮಳೆಗೆ ಮನೆಗಳು ಜಲಾವೃತ: 54 ಜನರ ರಕ್ಷಣೆ

ನೇರವಾಗಿ ಹಿಂದು ಸಮಾಜ ಟೀಕೆ ಮಾಡುವ ಧೈರ್ಯ ಯಾರು ಮಾಡಿರಲಿಲ್ಲ. ಈಗ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಿಂದು ಧರ್ಮಕ್ಕೆ ಟೀಕೆ ಮಾಡುತ್ತಿದ್ದಾರೆ. ಬಿಜೆಪಿಗೆ ಪೂರ್ಣ ಬಹುಮತ ಬರದಿರುವುದು ರಾಹುಲ್ ಗಾಂಧಿಗೆ ಖುಷಿ ತರಿಸಿದೆ. ಹಿಂದೂಗಳಿಗೆ ರಾಹುಲ್ ಗಾಂಧಿ ನೋವುಂಟು ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಗೌರವ ಬರುವ ರೀತಿ ನಡೆದುಕೊಳ್ಳಲಿ. ಇಲ್ಲದಿದ್ದರೆ ಇಡೀ ಹಿಂದೂ ಸಮಾಜ ತಿರುಗಿ ಬೀಳಲಿದೆ ಎಂದು ಎಚ್ಚರಿಸಿದರು.

RELATED ARTICLES

Related Articles

TRENDING ARTICLES