Sunday, October 6, 2024

ಡೆಂಘೀ ನಿಯಂತ್ರಣಕ್ಕೆ ಗ್ರಾಮ ಸಮಿತಿ ರಚನೆ- ಪ್ರಿಯಾಂಕ್​​ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ಎಲ್ಲ ಗ್ರಾಮ ಪಂಚಾಯತ್‌ಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಈಗಾಗಲೇ ಇರುವ ಗ್ರಾಮ ಮಟ್ಟದ ಸಮಿತಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ..

ಇದನ್ನು ಓದಿ: ಥಾಣೆಯಲ್ಲಿ ಮಳೆಗೆ ಮನೆಗಳು ಜಲಾವೃತ: 54 ಜನರ ರಕ್ಷಣೆ

ಈ ಕುರಿತು ವಿಸ್ತ್ರತ ಸೂಚನೆಗಳನ್ನು ಹೊರಡಿಸಿರುವ ಸಚಿವರು, ಗ್ರಾಮ ಮಟ್ಟದಲ್ಲಿರುವ ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿಯನ್ನು ಡೆಂಘೀ ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಗ್ರಾಮ ಪಂಚಾಯಿತಿಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಕುಡಿಯುವ ನೀರಿನ ಸರಬರಾಜು ಟ್ಯಾಂಕ್‌ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಡೆಂಘೀ ಹರಡುವುದನ್ನು ತಡೆಗಟ್ಟಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಪಂಚಾಯತ್ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕು ಎಂದು ತಾಕೀತು ಮಾಡಿದ್ದಾರೆ.

ಮನೆಗಳು, ಅಂಗಡಿ-ಮುಂಗಟ್ಟುಗಳು, ಹೊಟೇಲ್‌ಗಳು, ವಾಣಿಜ್ಯ ಸಂಕೀರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘಕಾಲ ನಿಲ್ಲದಂತೆ ಕ್ರಮ ವಹಿಸಬೇಕು ಮತ್ತು ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳುಬೇಕು. ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು ಎಂದು ಆದೇಶಿಸಿದ್ದಾರೆ.

RELATED ARTICLES

Related Articles

TRENDING ARTICLES