Sunday, October 6, 2024

ನೀಟ್​​​-ಯುಜಿ ಪರೀಕ್ಷೆ: ಸುಪ್ರೀಂ ಕೋರ್ಟ್​ ನೀಡಿದ ಆದೇಶವೇನು?

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ 5 ರಂದು ನಡೆದಿದ್ದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್​​ ಮಹತ್ವದ ಆದೇಶ ನೀಡಿದೆ. ಪರೀಕ್ಷೆಯ ಪಾವಿತ್ರ್ಯತೆ ಹಾಳಾದರೆ ಮರು ಪರೀಕ್ಷೆಗೆ ಆದೇಶಿಸಬೇಕು ಎಂದು ಆದೇಶ ಹೊರಡಿಸಿದೆ.

ಇದನ್ನು ಓದಿ:ನನ್ನ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರ ಕೃಷ್ಣಂ ಪ್ರಣಯ ಸಖಿ : ಗೋಲ್ಡನ್ ಸ್ಟಾರ್ ಗಣೇಶ್

NEET UG-2024 ಪರೀಕ್ಷೆಗಳಲ್ಲಿ ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು, ಜುಲೈ 11ಕ್ಕೆ ವಿಚಾರಣೆ ಮುಂದೂಡಿದೆ. ಜುಲೈ 11ರಂದು ಅಂತಿಮ ವಿಚಾರಣೆ ನಡೆಯಲಿದ್ದು, ಅಂದಿನ ತೀರ್ಪು ಮಹತ್ವ ಪಡೆದಿದೆ.

ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಸಿಜೆಐ ಚಂದ್ರಚೂಡ್‌ ಅವರಿದ್ದ ನ್ಯಾಯಪೀಠವು ತಿಳಿಸಿತು. ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮದ ಕುರಿತಂತೆ ಮಹತ್ವದ ಮಾಹಿತಿ ನೀಡಬೇಕು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೀಟ್‌ ಮೂರು ನಿರ್ದೇಶನಗಳನ್ನು ನೀಡಿದೆ. ಹಾಗೆಯೇ, ತನಿಖೆಯ ವರದಿ ನೀಡಬೇಕು ಎಂಬುದಾಗಿ ಸಿಬಿಐಗೂ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಯಾವಾಗ ಎಂಬುದರ ಮಾಹಿತಿ ಕೊಡಿ. ಯಾವ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ ಎಂಬುದರ ಮಾಹಿತಿ ಪ್ರತ್ಯೇಕವಾಗಿ ಇರಲಿ ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚಿಸಿದೆ. ಇತ್ತ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ, ಒಎಂಆರ್ ಶೀಟ್ ದುರ್ಬಳಕೆ ಮತ್ತು ವಂಚನೆ ಮುಂತಾದ ಕಾರಣಗಳಿಗಾಗಿ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಪ್ರಬಲ ವಾದ ಮಂಡಿಸಿದ್ದಾರೆ.

RELATED ARTICLES

Related Articles

TRENDING ARTICLES