Sunday, October 6, 2024

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ; ನಾಲ್ವರು ಯೋಧರು ಹುತಾತ್ಮ

ಕಥುವಾ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಮಚೇಡಿ ಪ್ರದೇಶದಲ್ಲಿ ಸೋಮವಾರ ಉಗ್ರರು ಸೇನಾ ವಾಹನಗಳ ಮೇಲೆ ಹೊಂಚು ದಾಳಿ ನಡೆಸಿದ್ದು, ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಆರು ಮಂದಿ ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕಥುವಾ ಪಟ್ಟಣದಿಂದ 150 ಕಿ.ಮೀ ದೂರದಲ್ಲಿರುವ ಲೋಹೈ ಮಲ್ಹಾರ್‌ನ ಬದ್ನೋಟಾ ಗ್ರಾಮದ ಬಳಿಯ ಕಿಂಡ್ಲಿ-ಮಲ್ಹಾರ್ ರಸ್ತೆಯಲ್ಲಿ ಉಗ್ರರು ಹೊಂಚು ಹಾಕಿ, ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದಾರೆ.

ಉಗ್ರರು ಸೈನಿಕರ ಮೇಲೆ ಗ್ರೇನೆಡ್ ಹಾಗೂ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ. ಆದರೆ ಉಗ್ರರು ಸಮೀಪದ ಅರಣ್ಯಕ್ಕೆ ಓಡಿ ಹೋದರು. ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರು ಇತ್ತೀಚೆಗೆ ಗಡಿಯಿಂದ ಒಳನುಸುಳುತ್ತಿದ್ದು, ಎತ್ತರದ ಪ್ರದೇಶಗಳಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಒಟ್ಟು 10 ಸೈನಿಕರು ಗಾಯಗೊಂಡಿದ್ದರು. ಅವರಲ್ಲಿ ನಾಲ್ವರು ನಂತರ ಹುತಾತ್ಮರಾದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೂನ್ 9 ರಂದು ರಿಯಾಸಿ ಜಿಲ್ಲೆಯ ಶಿವ ಖೋರಿ ದೇವಸ್ಥಾನದಿಂದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಚಾಲಕ ಮತ್ತು ಕಂಡಕ್ಟರ್ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದರು. 41 ಮಂದಿ ಗಾಯಗೊಂಡಿದ್ದರು.

RELATED ARTICLES

Related Articles

TRENDING ARTICLES