ಬೆಂಗಳೂರು: ಬೆಳ್ಳಂ ಬೆಳಗ್ಗೆ ರಾಜಧಾನಿ ಬೆಂಗಳೂರಿನಲ್ಲಿ ಅವಘಡ ಸಂಭವಿಸಿದೆ. ನಡುರಸ್ತೆಯಲ್ಲಿ ಬಿಎಂಟಿಸಿ ಬಸ್ ಧಗಧಗನೆ ಉರಿದು ಬೆಂಕಿಗೆ ಆಹುತಿಯಾಗಿದೆ.
ಇದನ್ನೂ ಓದಿ: ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ನಗರದ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಇಂದು ಬೆಳಗ್ಗೆ ನೋಡ ನೋಡುತ್ತಿದ್ದಂತೆ ಬಿಎಂಟಿಸಿ ಬಸ್ಗೆ ಬೆಂಕಿ ಹೊತ್ತಿಕೊಂಡು ಉರಿದಿದೆ. ತಕ್ಷಣ ನಡುರಸ್ತೆಯಲ್ಲಿ ಬಸ್ ನಿಲ್ಲಿಸಿದ ಚಾಲಕ ಬಸ್ನಲ್ಲಿದ್ದವರನ್ನು ಕೆಳಗಿಳಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕೆಎ57-ಎಫ್ 1232 ಬಸ್ ಬೆಂಕಿಗಾಹುತಿಯಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.