Friday, September 20, 2024

ಜೈಲೂಟ ಜೀರ್ಣವಾಗುತ್ತಿಲ್ಲ, ಮನೆಯೂಟಕ್ಕಾಗಿ ‘ದಾಸ’ ರಿಟ್​ ಅರ್ಜಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌
ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಜೈಲಿನಲ್ಲಿ ನೀಡುತ್ತಿರುವ ಊಟ ಜೀರ್ಣವಾಗುತ್ತಿಲ್ಲ, ಮನೆಯಿಂದ ಊಟ, ಹಾಸಿಗೆ, ಪುಸ್ತಕಗಳನ್ನು ಪಡೆಯಲು ಅನುಮತಿ ಕೊಡುವಂತೆ ಕೋರಿ ಹೈಕೋರ್ಟ್​ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ ಮುಚ್ಚಿ ಹಾಕಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್​​

ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಊಟ, ಹಾಸಿಗೆ ಮತ್ತು ಪುಸ್ತಕಗಳನ್ನು ಮನೆಯಿಂದ ಪಡೆಯಲು ಅನುಮತಿ ಕೋರಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್​ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಜೈಲೂಟ ಸೇವಿಸಿ ಅತಿಸಾರ – ಭೇದಿ ಆಗುತ್ತಿದೆ. ಜೈಲಿನ ಆಹಾರ ಒಗ್ಗದೇ ಫುಡ್ ಪಾಯಿಸನ್​ ಆಗುತ್ತಿದೆ. ಈ ಸಂಬಂಧ ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ಅರ್ಜಿಯಲ್ಲಿ ನಟ ದರ್ಶನ್ ಪರ ವಕೀಲರು ಉಲ್ಲೇಖ ಮಾಡಿದ್ದಾರೆ. ಅತಿಸಾರ, ಭೇದಿಯಿಂದಾಗಿ ದರ್ಶನ್ ದೇಹದ ತೂಕ ತುಂಬಾ ಕಡಿಮೆಯಾಗಿದೆ ಎನ್ನಲಾಗಿದೆ. ದರ್ಶನ್​​ ಹಲವು ಕೆಜಿಗಳಷ್ಟು ತೂಕ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಮನೆ ಊಟಕ್ಕೆ ಅನುಮತಿ ನೀಡುವಂತೆ ಮಾಡಿದ್ದ ಕೋರಿಕೆಯನ್ನು ಜೈಲು ಅಧಿಕಾರಿಗಳು ಮನ್ನಿಸಿಲ್ಲ. ಕೋರ್ಟ್ ಆದೇಶವಿಲ್ಲವೆಂದು ಜೈಲು ಅಧಿಕಾರಿಗಳು ಅನುಮತಿ ನೀಡಿಲ್ಲ. ಜೈಲು ಅಧಿಕಾರಿಗಳ ನಿರಾಕರಣೆ ಕಾನೂನುಬಾಹಿರ ಮತ್ತು ಅಮಾನವೀಯವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸದ್ಯ ನಟ ದರ್ಶನ್‌, ಪವಿತ್ರಾಗೌಡ ಸೇರಿದಂತೆ 17 ಮಂದಿ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

RELATED ARTICLES

Related Articles

TRENDING ARTICLES