Friday, September 20, 2024

ಉಗ್ರರ ದಾಳಿಗೆ ತಕ್ಕ ಉತ್ತರ ನೀಡುವುದು ಅವಶ್ಯಕ: ಮುರ್ಮು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯನ್ನು ರಾಷ್ಟ್ರಪತಿ ದೌಪದಿ ಮುರ್ಮು ಖಂಡಿಸಿದ್ದು, ಹೇಡಿತನದ ಕೃತ್ಯ ಎಂದಿದ್ದಾರೆ.

ಇದನ್ನೂ ಓದಿ: ಕೋಟ್ಯಂತರ ಯುವ ಜನತೆಯ ಕನಸು ಭಗ್ನಗೊಳಿಸಿದ ಮೋದಿ: ಖರ್ಗೆ

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಭಯೋತ್ಪಾದಕರ ವಿರುದ್ಧ ಹೋರಾಡಿ ಪ್ರಾಣ ಕಳೆದುಕೊಂಡ ವೀರ ಯೋಧರ ಕುಟುಂಬಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಘಟನೆಗೆ ತಕ್ಕ ಉತ್ತರ ನೀಡುವುದು ಅವಶ್ಯಕವಾಗಿದೆ ಎಂದು ರಾಷ್ಟ್ರಪತಿ ಮುರ್ಮು ಪ್ರತಿಪಾದಿಸಿದರು.
ಸೋಮವಾರ (ಜು.9) ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಐವರು ಯೋಧರು ಮೃತಪಟ್ಟಿದ್ದು, ಹಲವಾರು ಯೋಧರು ಗಾಯಗೊಂಡಿದ್ದಾರೆ. ಮಚೇಡಿ-ಕಿಂಡ್ಲಿ-ಮೊಲ್ದಾರ್ ರಸ್ತೆಯಲ್ಲಿ ಯೋಧರು ಗಸ್ತು ತಿರುಗುತ್ತಿದ್ದಾಗ ಭಯೋತ್ಪಾದಕರು ಗ್ರೆನೇಡ್ ಮತ್ತು ಗುಂಡಿನ ದಾಳಿ ನಡೆಸಿದ್ದಾರೆ. ಐವರು ಯೋಧರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES