ಶಿವಮೊಗ್ಗ: ರಾಜ್ಯದಲ್ಲಿ ಡೆಂಘೀ ಹಾವಳಿ ಮುಂದುವರಿದಿದ್ದು, ಶಿವಮೊಗ್ಗದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಹೊಸನಗರ ಮೂಲದ ಮಹಿಳೆ ಶಂಕಿತ ಡೆಂಘೀ ಜ್ವರದಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮಲೆನಾಡು ಶಿವಮೊಗ್ಗದಲ್ಲಿ ಡೆಂಘೀಗೆ ಇಬ್ಬರು ಬಲಿಯಾಗಿದ್ದಾರೆ.
ಇದನ್ನೂ ಓದಿ: ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಜೆಡಿಎಸ್ ವಿರೋಧ: ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯೆ
ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಶ್ಮಿ ನಾಯ್ಕ (42) ಎನ್ನುವ ಮಹಿಳೆ ಸಾವನಪ್ಪಿದ್ದಾರೆ. ಅವರು ಕಳೆದ ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿ ಆಗದೆ ಮಂಗಳವಾರ ಸಾವನ್ನಪ್ಪಿದ್ದಾರೆ.
ಈಗಾಗಲೇ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಸಾಕಷ್ಟು ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕ್ರಮವಹಿಸದೇ ನಿರ್ಲಕ್ಷ್ಯ ತೋರುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.