ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಇಬ್ಬರು ಮಕ್ಕಳನ್ನು ಭೇಟಿಯಾಗಲು ಇಂದು ಹೊಳೆನರಸಿಪುರ ಶಾಸಕ ಹೆಚ್.ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಆಗಮಿಸಿದ್ದರು.
ಇದನ್ನೂ ಓದಿ: ನಟ ದರ್ಶನ್ ಭೇಟಿಗೆ ಬಂದ ಅಕ್ಕ, ಭಾವ ಮತ್ತು ಅಳಿಯ
ಅಶ್ಲೀಲ ವೀಡಿಯೋಗಳ ಪೆನ್ಡ್ರೈವ್ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಅಸಹಜ ಲೈಂಗಿಕ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಇಬ್ಬರು ಪರಪ್ಪನ ಅಗ್ರಹಾರದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಎರಡು ದಿನಗಳ ಹಿಂದಷ್ಟೆ ಇಬ್ಬರು ಸಹೋದರರನ್ನು ಮುಖ್ಯ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಈ ಇಬ್ಬರು ಮಕ್ಕಳನ್ನು ಭೇಟಿಯಾಗಲು ಇದೇ ಮೊದಲ ಬಾರಿಗೆ ಹೆಚ್.ಡಿ ರೇವಣ್ಣ ಹಾಗು ಭವಾನಿ ರೇವಣ್ಣ ಜೊತೆಯಾಗಿ ಒಂದೇ ಕಾರಿನಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದಾರೆ.