ಹುಬ್ಬಳ್ಳಿ; ಆನ್ಲೈನ್ ಗೇಮ್ ವ್ಯಾಮೋಹಕ್ಕೆ ಸಿಲುಕಿ ಯುವಕ ಪ್ರಾಣ ಕಳೆದುಕೊಂಡಿರುವ ಘಟನೆ ಹುಬ್ಬಳ್ಳಿಯ ಶಿರಡಿ ನಗರದ ಹಾಸ್ಟೆಲ್ನಲ್ಲಿ ನಡೆದಿದೆ. ಇನ್ನು ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಮೃತ ದುರ್ದೈವಿಯಾಗಿದ್ದಾನೆ.
ಹೌದು, ರಾಕೇಶ್ ಶ್ರೀಶೈಲ್ ಜಂಬಲದಿನ್ನಿ ಬಿವಿಬಿ ಕಾಲೇಜಿನಲ್ಲಿ ಬಿಇ 6ನೇ ಸೆಮಿಸ್ಟರ್ನಲ್ಲಿ ಓದುತ್ತಿದ್ದನು. ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ನೆಲಸಿದ್ದನು. ರಾಕೇಶ್ ಪ್ರತಿದಿನವೂ ಆನ್ಲೈನ್ ಗೇಮ್ ಆಡುತ್ತಿದ್ದನು.
ಇದನ್ನು ಓದಿ; ಸಚಿವೆ ಶೋಭಾ ಕರಂದ್ಲಾಜೆಗೆ ಮದ್ರಾಸ್ ಹೈಕೋರ್ಟ್ ತರಾಟೆ
ಆನ್ಲೈನ್ ಗೇಮ್ನಿಂದ ಹಣ ಕಳೆದುಕೊಂಡಿದ್ದ ರಾಕೇಶ್ ಮನನೊಂದು ತಾನು ಇದ್ದ ಕೋಣೆಯ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಸತಿ ನಿಲಯಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಹುಬ್ಬಳ್ಳಿಯ ಅಶೋಕ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.