ನವದೆಹಲಿ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಗುರುವಾರ ಬೆನ್ನು ನೋವಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ (AIIMS) ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಏಮ್ಸ್ ಆಸ್ಪತ್ರೆಯೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು ಸದ್ಯ ವೈದ್ಯರು ಅವರ ಬೆನ್ನು ನೋವಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ ಎಂದು ತಿಳಿಸಿದೆ. ಎರಡು ದಿನಗಳ ಹಿಂದಷ್ಟೆ (ಜುಲೈ 10) ತಮ್ಮ 73ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರಾಜನಾಥ್ ಸಿಂಗ್ ಆಚರಿಸಿಕೊಂಡಿದ್ದರು.
ಇದನ್ನೂ ಓದಿ: ನನಗೇನೂ ಗೊತ್ತಿಲ್ಲ: ಶಾಸಕ ನಾಗೇಂದ್ರ ಪ್ರತಿಕ್ರಿಯೆ
ಮೋದಿ ಕ್ಯಾಬಿನೆಟ್ ನಲ್ಲಿ 2014ರಿಂದಲೂ ಕೇಂದ್ರ ಸಚಿವರಾಗಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲೂ ಲಕ್ನೋ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗುವ ಮೂಲಕ ಸತತ ಎರಡನೇ ಬಾರಿಗೆ ರಕ್ಷಣಾ ಸಚಿವರಾಗಿದ್ದಾರೆ.