Saturday, September 21, 2024

ಇಂದು ದ್ವಿತೀಯ ಪಿಯು ಪರೀಕ್ಷೆ- 3ರ ಫಲಿತಾಂಶ ಪ್ರಕಟ

ಬೆಂಗಳೂರು: (ಜು.16) ಇಂದು ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದ್ದು ಮಧ್ಯಾಹ್ನ 3 ಗಂಟೆ ನಂತರ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಜೂನ್ 24 ರಿಂದ ಜುಲೈ 5 ರವರೆಗೂ ರಾಜ್ಯದಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-3 ರ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಮಂಗಳವಾರ ಮಧ್ಯಾಹ್ನ ಫಲಿತಾಂಶ ಪ್ರಕಟವಾಗುತ್ತಿದೆ. ಮಧ್ಯಾಹ್ನ 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಇದನ್ನೂ ಓದಿ: ವಿಧಾನ ಮಂಡಲ ಅಧಿವೇಶನ: ಚರ್ಚೆಗೆ ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ

ದ್ವಿತೀಯ ಪಿಯುಸಿ ಮೂರನೇ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆದವು. ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ವಿಚಕ್ಷಣ ದಳಗಳನ್ನು ನಿಯೋಜಿಸಲಾಗಿತ್ತು.

ಕಲಾ ವಿಭಾಗದಲ್ಲಿ 19,113 ಬಾಲಕರು, 11,698 ಬಾಲಕಿಯರು ಸೇರಿ 30,811 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 8,817 ಬಾಲಕರು, 10,966 ಬಾಲಕಿಯರು ಸೇರಿ ಒಟ್ಟು 19,783 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 16,428 ಬಾಲಕರು, 8,973 ಬಾಲಕಿಯರು ಸೇರಿ ಒಟ್ಟು 25,401 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಒಟ್ಟಾರೆ 44,358 ಬಾಲಕರು, 31,637 ಬಾಲಕಿಯರು ಸೇರಿ ಒಟ್ಟು 75,995 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ -3 ಹೆಸರು ನೋಂದಾಯಿಸಿಕೊಂಡಿದ್ದರು.

RELATED ARTICLES

Related Articles

TRENDING ARTICLES