ಬೆಂಗಳೂರು: ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಇಂದು ರೈತನಿಗೆ ಅವಮಾನ ಮಾಡಿದ GT Mall ಕುರಿತ ಚರ್ಚೆಗಳು ನಡೆದವು. ಈ ಚರ್ಚಯಲ್ಲಿ ಮುಂದಿನ ಏಳುದಿನಗಳ ಕಾಲ ಮಾಲ್ ಮುಚ್ಚುವಂತೆ ಸಚಿವರು ಆದೇಶಕ್ಕೆ ಸೂಚಿಸಿದರು.
ಮುಂಗಾರು ವಿಧಾನಸಭೆ ಅಧಿವೇಶನ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಅಧಿವೇಶನ ಆರಂಭದಲ್ಲೇ ಜಿಟಿ ಮಾಲ್ ವಿಚಾರವಾಗಿ ಚರ್ಚೆ ನಡೆಯಿತು. ಬೆಂಗಳೂರಿನ ಜಿಟಿ ಮಾಲ್ ಒಳಗಡೆ ಓರ್ವ ರೈತರಿಗೆ ಬಿಡದೆ ಅವಮಾನ ಮಾಡಿರುವ ವಿಚಾರವಾಗಿ ಚರ್ಚೆ ನಡೆಯಿತು. ರೈತನನ್ನು ಮಾಲ್ ಒಳಗಡೆ ಬಿಡದೆ ಅವಮಾನಿಸಲಾಗಿದೆ ಎಂದು ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರು ಒಕ್ಕೊರಲಿನಿಂದ ಧ್ವನಿ ಎತ್ತಿದರು. ಶಾಸಕರ ಒತ್ತಾಯಾಕ್ಕೆ ಮಣಿದ ಸರ್ಕಾರ ಮಾಗಡಿ ರಸ್ತೆಯಲ್ಲಿರುವ ಜಿ.ಟಿ.ಮಾಲ್ ಅನ್ನು ಏಳು ದಿನ ಮುಚ್ಚಿಸಲಾಗುವುದು ಎಂದು ಸಚಿವ ಬೈರತಿ ಸುರೇಶ್ ಅಧಿವೇಶಕ್ಕೆ ತಿಳಿಸಿದರು.
ಇದನ್ನೂ ಓದಿ: ಏಕಾದಶಿ ಪ್ರಯುಕ್ತ ಅಪ್ಪುಗೆ ಫೋಟೋ ಮುಂದೆ ಎಡೆ ಇಟ್ಟು ಸದ್ಗತಿ ಪೂಜೆ ಸಲ್ಲಿಸಿದ ಅಭಿಮಾನಿ ಕುಟುಂಬ
ಮಾಲ್ ಸೆಕ್ಯುರಿಟಿ ಏಜೆನ್ಸಿ ಮೇಲೆ ಕ್ರಮ ಆಗಬೇಕು. ಮಾಲ್ ಮಾಲೀಕರ ಮೇಲೆ ಎಫ್ಐಆರ್ ಆಗಬೇಕು ಎಂದು ಗುರುಮಿಠಕಲ್ ಕಾಂಗ್ರೆಸ್ ಶಾಸಕ ಶರಣಗೌಡ ಕಂದಕೂರ ಒತ್ತಾಯಿಸಿದರು. ಬಳಿಕ ಮಾತನಾಡಿದ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ವರದಿ ತರಿಸಿಕೊಂಡು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಇದಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಕ್ಷೇಪ ವ್ಯಕ್ತಪಡಿಸಿದ್ದು ವರದಿ ತರಿಸಿಕೊಂಡು ಏನು ಕ್ರಮ ಕೈಗೊಳ್ಳುತ್ತೀರಿ? ಸಚಿವರಾಗಿ ಈ ರೀತಿ ಮಾತಾಡಬೇಡಿ. ಇದು ರೈತರ ವಿಚಾರ ಗಂಭೀರವಾಗಿ ಪರಿಗಣಿಸಿ. ಕೂಡಲೆ ಮಾಲ್ಗೆ ಒಂದು ವಾರ ವಿದ್ಯುತ್ ಸರಬರಾಜು ಬಂದ್ ಮಾಡಿ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಒತ್ತಾಯಿಸಿದರು.
ಬಳಿಕ ವಿಧಾನಸಭೆ ಸಭಾಪತಿ ಯುಟಿ ಖಾದರ್, ಸರ್ಕಾರ ಏನು ಕ್ರಮ ಕೈಗೊಳ್ಳುತ್ತೆ ಎಂದು ಸ್ಪಷ್ಟಪಡಿಸಿ ಎಂದು ಸಚಿವರಿಗೆ ಪ್ರಶ್ನಿಸಿದರು. ಈ ವೇಳೆ ಮಾತನಾಡಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಈಗಾಗಲೇ ಬಿಬಿಎಂಪಿ ಮುಖ್ಯ ಆಯುಕ್ತರ ಜೊತೆ ಚರ್ಚೆ ಮಾತಾಡಿದ್ದೇವೆ. 7 ದಿನ GTMall ಮುಚ್ಚಿಸಲಾಗುತ್ತದೆ. ಕಾನೂನಿನಲ್ಲಿ ಅವಕಾಶ ಇದೆ ಎಂದಿದ್ದಾರೆ ಎಂದು ತಿಳಿಸಿದರು.