Monday, October 7, 2024

KRS ಡ್ಯಾಂ ಭರ್ತಿಗೆ ಕೇವಲ 2 ಅಡಿ ಮಾತ್ರ ಬಾಕಿ

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ ಜೋರಾಗಿದ್ದು, ನದಿಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಡ್ಯಾಂ ಭರ್ತಿಗೆ ಇನ್ನು ಎರಡು ಅಡಿಯಷ್ಟೇ ಬಾಕಿಯಿದೆ.

ಕೆಆರ್‌ಎಸ್ ಡ್ಯಾಂನಿಂದ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಡ್ಯಾಂ ಬಹುತೇಕ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಹೊರ ಹರಿವು ಹೆಚ್ಚಿಸಲಾಗಿದೆ. ಸದ್ಯ ಡ್ಯಾಂ ಒಳ ಹರಿವು ಹೆಚ್ಚಳವಾಗಿದೆ. ಸದ್ಯ ಡ್ಯಾಂ ಒಳಹರಿವು 69,617 ಕ್ಯೂಸೆಕ್‌ಗೆ ಏರಿಕೆಯಾಗಿತ್ತು. ನಿನ್ನೆ 51 ಸಾವಿರ ಕ್ಯುಸೆಕ್ ಒಳ ಹರಿವು ಇತ್ತು. ಈಗಾಗಲೇ ಕೆಆರ್‌ಎಸ್ 122.70 ಅಡಿ ಭರ್ತಿಯಾಗಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಡ್ಯಾಂನಿಂದ ಸದ್ಯ 25 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಮಧ್ಯಾಹ್ನದ ವೇಳೆಗೆ ಹೊರ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಮುಂದಿನ 5 ದಿನ ರಾಜ್ಯದಲ್ಲಿ ವರುಣಾರ್ಭಟ ಫಿಕ್ಸ್

ಹೊರ ಹರಿವು ಹೆಚ್ಚಾದಂತೆ ಡ್ಯಾಂ ಕೆಳಭಾಗದ ನದಿ ಪಾತ್ರದಲ್ಲಿ ನೆರೆ ಭೀತಿ ಇದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಬಾರೀ ಮಳೆ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದ ಹೊರಹರಿವಿನ ಪ್ರಮಾಣ ಮತ್ತಷ್ಟು ಏರಿಕೆಯಾಗಿದೆ. ಡ್ಯಾಂನಿಂದ 50 ಸಾವಿರಕ್ಕೂ ಅಧಿಕ ಕ್ಯುಸೆಕ್ ಹೊರಹರಿವು ಮಾಡಲಾಗಿದೆ. ನದಿಗೆ ದಿಢೀರ್ ಹೊರಹರಿವು ಏರಿಕೆ ಮಾಡಲಾಗಿದೆ. ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ. ಜನರು ನದಿಗಿಳಿಯದಂತೆ ಜಿಲ್ಲಾಡಳಿತ ಸೂಚಿಸಿದೆ.

RELATED ARTICLES

Related Articles

TRENDING ARTICLES