ನವದೆಹಲಿ: ಮೋದಿ 3.0 ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ 2024-25ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ.
ಇದನ್ನೂ ಓದಿ: ನನ್ನ ಮತ್ತು ವಿರಾಟ್ ಕೊಹ್ಲಿ ಸಂಬಂಧ ಕೇವಲ ಟಿಆರ್ಪಿಗಾಗಿ ಅಲ್ಲ : ಗೌತಮ್ ಗಂಭೀರ್
2024ರ ಫೆಬ್ರುವರಿಯಲ್ಲಿ ಮಂಡಿಸಿದ ಮಧ್ಯಂತರ ಬಜೆಟ್ ಸೇರಿ ನಿರ್ಮಲಾ ಅವರು ಈವರೆಗೆ 6 ಬಾರಿ ಬಜೆಟ್ ಮಂಡಿಸಿದ್ದಾರೆ. ಇಂದು (ಮಂಗಳವಾರ) ಸತತ ಏಳನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಸಂಪ್ರದಾಯದಂತೆ ಬಜೆಟ್ ಮಂಡನೆಯ ಒಂದು ದಿನದ ಮೊದಲು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯ ವರದಿಯನ್ನು ಮಂಡಿಸಲಾಗಿದೆ.
ರಾಜ್ಯಗಳು ಕೇಂದ್ರ ಬಜೆಟ್ ಮಂಡನೆ ಮೇಲೆ ಭಾರಿ ನಿರೀಕ್ಷೆ ಹೊಂದಿದ್ದು ಮೂಲಭೂತ ಸೌಕರ್ಯಗಳು ಸೇರಿದಂತೆ ಹಲವು ಕ್ಷೇತ್ರಗಳು ಅನುದಾನದ ನಿರೀಕ್ಷೆಯಲ್ಲಿದೆ.