ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಹಂಪಸಂದ್ರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ ಚಿಕ್ಕಬಳ್ಳಾಪುರದಲ್ಲಿ ಶೂಟೌಟ್ ಘಟನೆ ನಡೆದಿದೆ.
ಇದನ್ನೂ ಓದಿ: ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಕೊಲೆ!
ಚಿಕ್ಕಪ್ಪನೇ ತನ್ನ ಅಣ್ಣನ ಮಗನನ್ನು ಪಿಸ್ತೂಲ್ನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ನಜೀರ್ ಅಹ್ಮದ್ (46) ಕೊಲೆಯಾದ ದುರ್ದೈವಿ. ಕೊಲೆ ಮಾಡಿದವನನ್ನು ಬಶೀರ್ ಅಹ್ಮದ್ (66) ಎಂದು ಗುರುತಿಸಲಾಗಿದೆ.
ಆರೋಪಿ ಬಶೀರ್ ಅಹ್ಮದ್ ತನ್ನ ಅಣ್ಣ ಮಾಬೂಸಾಬಿ ಮೇಲೆಯೂ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ. ಗಂಭೀರ ಗಾಯಗೊಂಡ ಮಾಬೂಸಾಬಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೌದಿಯಲ್ಲಿ ಕೆಲಸ ಮಾಡಿಕೊಂಡಿದ್ದ ಬಶೀರ್ ಅಹ್ಮದ್ ಇತ್ತೀಚೆಗಷ್ಟೇ ಊರಿಗೆ ಬಂದಿದ್ದ. ಸದ್ಯ ಪೊಲೀಸರು ಬಶೀರ್ ಅಹ್ಮದ್ನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರ ಭೇಟಿ ನೀಡಿದ್ದು, ಪರಿಶೀಲಿಸುತ್ತಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.