ಬೆಂಗಳೂರು: ಶಿಕ್ಷಕರು ಶಾಲಾ ವಿದ್ಯಾರ್ಥಿನಿಯರ ಜಡೆ ಕತ್ತರಿಸಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಸರ್ಕಾರಿ ಶಾಲೆಯಲ್ಲಿ ನಡೆದಿದ್ದು ಶಾಲೆಯ ಮುಂದೆ ಪೋಷಕರು ಗಲಾಟೆ ನಡೆಸಿದ್ದಾರೆ.
ಶಾಲೆಗೆ ಬರುವಾಗ ಎರಡು ಜಡೆಗಳನ್ನು ಹಾಕಿಲ್ಲ ಎಂಬ ಕಾರಣಕ್ಕೆ ಶಾಲಾ ಶಿಕ್ಷಕರು ವಿದ್ಯಾರ್ಥಿನಿಯ ಜಡೆಯನ್ನು ಕತ್ತರಿಸಿದ್ದಾರೆ ಎನ್ನಲಾಗಿದೆ. ಶಾಲೆಯ ಮೂವರು ವಿದ್ಯಾರ್ಥಿನಿಯರ ಕೂದಲನ್ನು ಕತ್ತರಿಸಿದ್ದಾರೆ. ಈ ಘಟನೆಯೂ ಶುಕ್ರವಾರ ನಡೆದಿದೆ.
ಇದನ್ನೂ ಓದಿ:ಕುರಿ ಮಾಂಸದ ಹೆಸರಲ್ಲಿ ನಾಯಿ ಮಾಂಸ ಸಾಗಾಟ ಆರೋಪ: ಹಿಂದುಪರ ಕಾರ್ಯಕರ್ತರು ಆಕ್ರೋಶ
ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಈ ಶಿಕ್ಷೆ ವಿಧಿಸಲಾಗಿದೆ.
ಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್ ಸೂಚನೆಯಂತೆ ಶಾಲಾ ಶಿಕ್ಷಕಿ ಪವಿತ್ರ ಎಂಬುವವರು ವಿದ್ಯಾರ್ಥಿನಿಯರ ಜಡೆ ಕತ್ತರಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಇಂದು ಶಾಲೆಯ ಮುಂದೆ ವಿದ್ಯಾರ್ಥಿನಿಯರ ಪೋಷಕರು ಗಲಾಟೆ ಮಾಡಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ವಿಚಾರಣೆ ನಡೆಸುತ್ತಿದ್ದಾರೆ.