Friday, September 20, 2024

Paris Olympics 2024: ಭಾರತದ ಪದಕ ಭೇಟೆ ಆರಂಭ, ಏರ್​ ಪಿಸ್ತೂಲ್​ ಶೂಟಿಂಗ್​ನಲ್ಲಿ ಮನು ಭಾಕರ್​ಗೆ ಕಂಚು

ಪ್ಯಾರಿಸ್​: ಪ್ಯಾರಿಸ್​​ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್​ನಲ್ಲಿ ಭಾರತ ಪದಕ ಭೇಟಿ ಆರಂಭಿಸಿದೆ. 33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್​ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದಕ್ಕೆ ಕಂಚಿನ ಪದಕ ಸಿಕ್ಕಿದೆ.

ಇದನ್ನೂ ಓದಿ: KAS ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಕಾಂಗ್ರೆಸ್​ ಸಂಸದ: ಭಾರೀ ಚರ್ಚೆಗೆ ಗ್ರಾಸವಾಯ್ತು ಸುನೀಲ್ ಬೋಸ್ ನಡೆ

ಪ್ಯಾರಿಸ್​ನಲ್ಲಿ ಭಾನುವಾರ ನಡೆದ ಏರ್ ಪಿಸ್ತೂಲ್ ಶೂಟಿಂಗ್​​ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಕೊರಳ್ಳೊಡಿದ್ದಾರೆ. ಈ ಮೂಲಕ ಏರ್​ ಪಿಸ್ತೂಲ್​ ಶೂಟಿಂಗ್‌ನಲ್ಲಿ ಭಾರತಕ್ಕೆ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಶೂಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಕಳೆದ ಒಲಿಂಪಿಕ್ಸ್​ನಲ್ಲಿ ಅಂದರೆ 2020 ರಲ್ಲಿ ನಡೆದಿದ್ದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಯಾವುದೇ ವಿಭಾಗದಲ್ಲೂ ಅರ್ಹತೆ ಪಡೆಯಲು ವಿಫಲರಾಗಿದ್ದ 22 ವರ್ಷದ ಮನು ಭಾಕರ್ ಅವರಿಗೆ ಇದು ಒಲಿಂಪಿಕ್ಸ್‌ನಲ್ಲಿ ಮೊದಲ ಪದಕವಾಗಿದೆ.

RELATED ARTICLES

Related Articles

TRENDING ARTICLES