Friday, September 20, 2024

ಕಸ್ತೂರಿ ರಂಗನ್​ ವರದಿ ವಿರೋಧಿಸಿದ್ದ ಕೇರಳಕ್ಕೆ ಈಗ ಸಂಕಷ್ಟ

ಕೇರಳ: ಕೇರಳದಲ್ಲಿ ಭಾರಿ ಕುಸಿತ ಹಿನ್ನೆಲೆ ನಾಲ್ಕು ಗ್ರಾಮಗಳೇ ಕಣ್ಮರೆಯಾಗಿದ್ದು, ಹಲವಾರು ಮಂದಿ ಜೀವ ಬಿಟ್ಟಿದ್ದಾರೆ. ಕೇರಳ ಪಶ್ಚಿಮ ಘಟ್ಟಗಳಲ್ಲಿ ಬರುವ ಒಂದು ರಾಜ್ಯವಾಗಿದ್ದು, ಕಸ್ತೂರಿ ರಂಗನ್​ ವರದಿಗೆ ವಿರೋಧ ವ್ಯಕ್ತಪಡಿಸಿತ್ತು. ಒಂದು ವೇಳೆ ಈ ಕಸ್ತೂರಿ ರಂಗನ್​ ವರದಿಗೆ ಬೆಂಬಲ ನೀಡಿದ್ದರೇ ಇಂಥ ಭೂ ಕುಸಿತಗಳು ಸಂಭವಿಸುತ್ತಿರಲಿಲ್ಲ ಎನ್ನುವುದು ಪರಿಸರವಾದಿಗಳ ವಾದ.

ಪ್ರೊ.ಕಸ್ತೂರಿ ರಂಗನ್ ನೇತೃತ್ವದ ಸಮಿತಿ 2013ರಲ್ಲಿ ಸಲ್ಲಿಸಿದ್ದ ವರದಿಗಳನ್ನು ಕೇರಳ ಸರ್ಕಾರ ವಿರೋಧಿಸಿತ್ತು. ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಹರಡಿರುವ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳನ್ನು ಕಾಪಾಡುವ ಬಗ್ಗೆ ಈ ಸಮಿತಿ ಅಧ್ಯಯನ ಮಾಡಿ ವರದಿ ನೀಡಿತ್ತು.

ಇದನ್ನೂ ಓದಿ: ವಯನಾಡಿನಲ್ಲಿ ಗುಡ್ಡ ಕುಸಿತ, 21 ಮಂದಿ ಸಾವು

ಕೇರಳದ 14 ಜಿಲ್ಲೆಗಳ ಪೈಕಿ 12 ಜಿಲ್ಲೆಗಳಲ್ಲಿರುವ 123 ಹಳ್ಳಿಗಳ ವ್ಯಾಪ್ತಿಯ 13,108 ಚದರ ಕಿ.ಮೀ ಭೂಪ್ರದೇಶವನ್ನು ಪರಿಸರ ಸೂಕ್ಷ್ಮ ಭೂಪ್ರದೇಶ ಎಂದು ಪರಿಗಣಿಸಬೇಕು ಎಂಬುದಾಗಿ ಶಿಫಾರಸು ಮಾಡಿತ್ತು. 123 ಹಳ್ಳಿಗಳ ಪೈಕಿ 60 ಹಳ್ಳಿಗಳು ಇಡುಕ್ಕಿ ಮತ್ತು ವಯನಾಡ್ ಜಿಲ್ಲೆಗಳಿಗೆ ಸೇರಿವೆ. ಈ ಹಳ್ಳಿಗಳ ವ್ಯಾಪ್ತಿಯಲ್ಲಿ ಗಣಿಗಾರಿಕೆ, ಕ್ವಾರಿ, ಮರ ಕಡಿಯುವುದು, ಕೈಗಾರಿಕೆ ಸ್ಥಾಪನೆ ಮತ್ತು ಕಟ್ಟಡ ನಿರ್ಮಾಣದಂಥ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಿತ್ತು. ಇದನ್ನ ವಿರೋಧಿಸಿ ಕೇರಳದಲ್ಲಿ ಪ್ರತಿಭಟನೆ ನಡೆದಿತ್ತು. ಈಗ ಇದೇ ಪ್ರದೇಶ ಅಕ್ಷರಶಃ ಸ್ಮಶಾನವಾಗಿ ಮಾರ್ಪಟ್ಟಿದೆ.

RELATED ARTICLES

Related Articles

TRENDING ARTICLES