Friday, September 20, 2024

ಭ್ರಷ್ಟಾಚಾರ ಪಿತಾಮಹ ಯಾರು? ವಿಜಯೇಂದ್ರ ಗಂಡಸಾಗಿದ್ರೆ ಹೇಳಲಿ: ಡಿಕೆ ಶಿವಕುಮಾರ್​

ರಾಮನಗರ: ನಾಳೆ ಆಗಸ್ಟ್​ 3 ರಂದು ಬಿಜೆಪಿ ಮತ್ತು ಜೆಡಿಎಸ್​​ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಗೆ ಟಕ್ಕರ್ ಕೊಡಲು ಕಾಂಗ್ರೆಸ್​​ ಜನಾಂದೋಲ ಕಾರ್ಯಕ್ರಮ ನಡೆಸುತ್ತಿದ್ದು, ಅದಕ್ಕೂ ಮುನ್ನ ಇಂದು (ಆಗಸ್ಟ್ 02) ರಾಮನಗರ ಜಿಲ್ಲೆಯ ಬಿಡದಿಯಲ್ಲಿ ನಡೆದ ಜನಾಂದೋಲ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಶೋಕಾಸ್​ ನೋಟಿಸ್​: ನಾನು ಇದಕ್ಕೆಲ್ಲ ಹೆದರುವುದಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ

ವೇದಿಕೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಮಾಡಿದ ಹಗರಣಕ್ಕೆ ಜವಾಬ್ದಾರಿ ಯಾರು? ಯಾವ ಬ್ಯಾಂಕ್‌ಗೆ ಹಣ ಹೋಗಿದೆ ಎಂಬ ಬಗ್ಗೆ ಮಾಹಿತಿ ಕೊಡಬೇಕು. ಪಾದಯಾತ್ರೆಯಲ್ಲಿ ನಾವು ಪ್ರಶ್ನೆ ಕೇಳಿದ್ದಕ್ಕೆ ಉತ್ತರ ಕೊಡಬೇಕು. ನಮ್ಮನ್ನು ಜೈಲಿಗೆ ಹಾಕಿಸಬೇಕು ಎಂದು ಸಂಚು ನಡೆಯುತ್ತಿದೆ. ನಾನು ಜೈಲಿಗೆ ಹೋಗೋಕೂ ರೆಡಿ ಇದ್ದೇನೆ. ನನ್ನಂತಹ ಬೇಕಾದಷ್ಟು ಜನ ಕಾಂಗ್ರೆಸ್​​ನಲ್ಲಿ ಹುಟ್ಟಿಕೊಳ್ಳುತ್ತಾರೆ. ವಿಜಯೇಂದ್ರ ವಿರುದ್ಧ ಎಲ್ಲಾ ಆರೋಪಗಳನ್ನು ಬಿಚ್ಚಿ ಹೇಳುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಭ್ರಷ್ಟಾಚಾರದ ಪಿತಾಮಹ ಅಂತಾ ಅಂದ್ರೆ ಏನು ಎಂದು ಹೇಳಲಿ. ವಿಜಯೇಂದ್ರ ಗಂಡಸಾಗಿದ್ರೆ ಹೇಳಲಿ, ಅವನಿಗೆ ಗೌರವ ಕೊಡುತ್ತೇನೆ. ಆದ್ರೆ, ಯಾವ ಭ್ರಷ್ಟಾಚಾರ, ಏನು ತನಿಖೆಯಾಗಿದೆ ಎಂದು ಹೇಳಬೇಕು. ಆಗ ಬಿ.ವೈ.ವಿಜಯೇಂದ್ರನನ್ನು ಪಾರ್ಟಿ ಅಧ್ಯಕ್ಷ ಎಂದು ಒಪ್ಪಿಕೊಳ್ಳುತ್ತೇನೆ. ನಾನು ED ಪ್ರಕರಣದಲ್ಲಿ ಜೈಲಿಗೆ ಹೋಗಿದ್ದೆ. ಸುಪ್ರೀಂಕೋರ್ಟ್​​ನಲ್ಲಿ ED ಕೇಸ್ ವಜಾ ಆಗಿದ್ದು ಗೊತ್ತಾ? ಇದಕ್ಕೆಲ್ಲ ಉತ್ತರ ಕೊಡುತ್ತೇನೆ ಸಮಯ ಬರಲಿ ಎಂದು ತೀವ್ರ ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES