Friday, September 20, 2024

ಕೇರಳ ಭೂಕುಸಿತ: ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ನಕಾರ

ಕೇರಳ: ವಯನಾಡು ಜಿಲ್ಲೆಯಾದ್ಯಂತ ಸಂಭವಿಸಿರುವ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 300ರ ಗಡಿ ದಾಟಿದ್ದರೂ, ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ.

ಇದರ ಬೆನ್ನಲ್ಲೇ, ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ವಿಪತ್ತು ಪೀಡಿತ ಪ್ರದೇಶ ಎಂದು ಘೋಷಿಸಿ ಕೇರಳ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಈ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಒತ್ತಾಯಿಸಿ ನಾವು ಈಗಾಗಲೇ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಆದರೆ, ಅವರು ಸಿದ್ದರಿಲ್ಲ. ಕಾನೂನಾತ್ಮಕ ಸಮಸ್ಯೆಗಳಿವೆ ಎಂದು ಹೇಳುತ್ತಾರೆ. ನಾವು ಇದನ್ನು ರಾಜ್ಯ ವಿಪತ್ತು ಎಂದು ಘೋಷಿಸಲಿದ್ದೇವೆ ಎಂದು ಕೇರಳ ಕಂದಾಯ ಸಚಿವ ಕೆ.ರಾಜನ್​ ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಗುಡ್ಡ ಕುಸಿತ: 330ಕ್ಕೇರಿದ ಸಾವಿನ ಸಂಖ್ಯೆ

ರಾಜ್ಯದ ಆಡಳಿತ ಮತ್ತು ವಿರೋಧ ಪಕ್ಷಗಳು ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಹೆಚ್ಚುವರಿ ಅನುದಾನ ನೀಡಬೇಕು ಎಂದು ಒತ್ತಾಯಿಸಿವೆ. ಇದರ ನಡುವೆಯೇ ಹೊರಡಿಸಲಾಗಿರುವ ಆದೇಶವು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ರಾಜಕೀಯ ಕಲಹಕ್ಕೆ ನಾಂದಿ ಹಾಡುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES