ಚಿಕ್ಕಬಳ್ಳಾಪುರ: ಹೆತ್ತ ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ ಅಮಾನವೀಯ ಘಟನೆ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಚಿನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್ ಬಸ್
ವಿಕೃತ ಕಾಮುಕನಾದ ಅಶೋಕ್ ತನ್ನ ವೃದ್ಧ ತಾಯಿ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಬಳಿಕ ತಾಯಿ ಮೇಲೆ ಹಲ್ಲೆ ನಡೆಸಿ ತಿಪ್ಪೆಗೆ ಎಸೆದು ಪರಾರಿಯಾಗಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ವೃದ್ಧ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಪರಾರಿಯಾಗಿದ್ದ ಆರೋಪಿ ಅಶೋಕ್ ನನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದು ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.