ಪ್ಯಾರಿಸ್ ಒಲಿಂಪಿಕ್ಸ್ನ ಮಹಿಳಾ ಕುಸ್ತಿ ಪಂದ್ಯದಲ್ಲಿ ಫೈನಲ್ ತಲುಪಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರು ಅನರ್ಹರಾಗಿದ್ದಾರೆ. ವಿನೇಶ್ ಫೋಗಟ್ ಅವರ ದೇಹದ ತೂಕದಲ್ಲಿ 150 ಗ್ರಾಂ ಏರಿಕೆಯಾದ ಪರಿಣಾಮ ಒಲಿಪಿಂಕ್ಸ್ ನಿಯಮದ ಅನುಸಾರ ಅನರ್ಹಗೊಳಿಸಲಾಗಿದೆ.
ಇದನ್ನೂ ಓದಿ: ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಆಘಾತ : ಚಿನ್ನ ಗೆಲ್ಲುವ ಭರವಸೆ ಮೂಡಿಸಿದ್ದ ವಿನೇಶ್ ಫೋಗಾಟ್ ಅನರ್ಹ!
ಈ ಆಘಾತದ ಸುದ್ದಿಯ ಮಧ್ಯೆ ವಿನೇಶ್ ಫೋಗಟ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಇಡೀ ರಾತ್ರಿ ಜಾಗಿಂಗ್, ಸೈಕ್ಲಿಂಗ್, ಸ್ಕಿಪ್ಪಿಂಗ್ ಮಾಡಿದ ವಿನೇಶ್ ಫೋಗಟ್ ಅವರಿಗೆ ಡಿಹೈಡ್ರೇಷನ್ ಆಗಿದೆ. ಡಿಹೈಡ್ರೇಷನ್ನಿಂದ ಬಳಿಸದ ವಿನೇಶ್ ಫೋಗಟ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅತಿಯಾದ ದೈಹಿಕ ಕಸರತ್ತಿನಿಂದ ವಿನೇಶ್ ಫೋಗಟ್ ಅವರು ಬಳಲಿದ್ದು, ಪ್ಯಾರಿಸ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯ ವಿನೇಶ್ ಫೋಗಟ್ ಅವರ ಆರೋಗ್ಯ ಸ್ಥಿರವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.
ವಿನೇಶ್ ಫೋಗಟ್ ಅವರು ತೂಕ ಇಳಿಸಲು ವ್ಯಾಯಾಮ ಮಾಡಿದ್ದೇ ಈ ಸ್ಥಿತಿಗೆ ಕಾರಣ ಎನ್ನಲಾಗಿದೆ. ದೇಹದಲ್ಲಿ ನೀರಿನ ಅಂಶದ ಕೊರತೆಯಿಂದ ವಿನೇಶ್ ಅಸ್ವಸ್ಥರಾಗಿದ್ದಾರೆ. ವಿನೇಶ್ ಫೋಗಟ್ ಅವರು ಆಸ್ಪತ್ರೆ ಸೇರಿದ ಮೇಲೆ ತೂಕ ಜಾಸ್ತಿಯಾಗಿರುವ ಸಾಧ್ಯತೆ ಇದೆ.