ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು ಸೋಂಕಿತರ ಸಂಖ್ಯೆ 9 ಸಾವಿರದ ಗಡಿ ದಾಟಿದೆ. ರಾಜ್ಯ ರಾಜಧಾನಿಯಲ್ಲೂ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಆಸ್ಪತ್ರೆಯಲ್ಲಿ ಹಾಸಿಗೆಗಳು ಫುಲ್ ಆಗಿವೆ. ಕಳೆದ 4 ರಿಂದ 5 ದಿನದಲ್ಲಿ ಬೆಂಗಳೂರಿನಲ್ಲಿ ಅಧಿಕ ಕೇಸ್ಗಳು ಪತ್ತೆಯಾಗುತ್ತಿದೆ. ಹಲವು ಕೊರೊನಾ ರೋಗಿಗಳಿಗೆ ಬೆಡ್ ಸಿಗುತ್ತಿಲ್ಲ . ಬೆಂಗಳೂರಿನ ರಾಜೀವ್ ಗಾಂಧಿ, ಬೋರಿಂಗ್, ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ಐಸಿಯು ಬೆಡ್ಗಳು ಖಾಲಿಯಾಗಿವೆ ಎನ್ನಲಾಗುತ್ತಿದೆ. ಚಿಕ್ಕಪೇಟೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಹಾಗಾಗಿ ಮಾರುಕಟ್ಟೆಯನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ವಿವಿಧ ಸಂಘಟನೆಗಳು ನಿರ್ಧರಿಸಿವೆ. ಚಿಕ್ಕ ಪೇಟೆಯಲ್ಲಿ ಅಧಿಕ ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು ಇದರ ಬಗ್ಗೆ ಬಿಬಿಎಂಪಿ ಗಮನಕ್ಕೂ ತರಲಾಗಿದ್ದು ಅಧಿಕಾರಿಗಳು ಬೆಡ್ ಇಲ್ಲ ಅಂತಿದ್ದಾರೆ. ಹೀಗಾಗಿ ಪಾಸಿಟಿವ್ ಬಂದವರು ಮನೆಯಲ್ಲೇ ಇದ್ದಾರೆ ಎಂದು ಚಿಕ್ಕಪೇಟೆ ಕಾರ್ಪೋರೇಟರ್ ಶಿವಕುಮಾರ್ ಪವರ್ ಟಿವಿಗೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಸಿಲಿಕಾನ್ ಸಿಟಿಯಲ್ಲಿ ಕೋವಿಡ್19 ಪ್ರಕರಣ 1200ರ ಗಡಿ ದಾಟಿದೆ. ಈ ಹಿನ್ನೆಲೆಯಲ್ಲಿ ಮುಂಬೈ, ದೆಹಲಿ ಸ್ಥಿತಿ ಬೆಂಗಳೂರಿಗೂ ಎದುರಾಗುತ್ತಾ ಅನ್ನೋ ಅನುಮಾನ ಮೂಡಿದೆ.