Wednesday, October 2, 2024

ಸಿಎಂ ರಾಜೀನಾಮೆ ನೀಡಿದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ; ರಾಜ್ಯ ಸರ್ಕಾರದ ಮೇಲೆ ಹರಿಹಾಯ್ದ ಸಂಸದ ಬ್ರಿಜೇಶ್ ಚೌಟ

ಮಂಗಳೂರು : ಸಿದ್ಧರಾಮಯ್ಯ ಅವರ ಬಗ್ಗೆ ಹೇಳಿಕೆ ನೀಡಿರುವ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ. ಸಿದ್ದರಾಮಯ್ಯನವರು ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣ ನಡೆದಿಲ್ಲ, ಕೇವಲ 84 ಕೋಟಿ ಹಗರಣ ನಡೆದಿದೆ ಎಂದು ಹೇಳಿ ತಮ್ಮ ಸರ್ಕಾರದ ಹಗರಣವನ್ನು ಒಪ್ಪಿಕೊಂಡಿದ್ಧಾರೆ.

ಅದೇ ರೀತಿ ಈಗ ಮೂಡ ಹಗರಣದ 14 ಸೈಟ್ ಗಳನ್ನು ಹಿಂತಿರುಗಿಸಿ ಜನರ ಮುಂದೆ ತಪ್ಪನ್ನು ಒಪ್ಪಿಕೊಂಡಿದ್ದಾರೆ. ತಪ್ಪಾಗಿದೆ, ಕ್ಷಮಿಸಿ ಎಂದು ಸಿದ್ದರಾಮಯ್ಯ ಜನರ ಮುಂದೆ ವರ್ತಿಸುತ್ತಿದ್ದಾರೆ. ನಾನೇನು ತಪ್ಪೇ ಮಾಡಿಲ್ಲ ಎಂದು ಹೇಳುವ ವ್ಯಕ್ತಿ ಯಾಕೆ ಸೈಟ್ ವಾಪಾಸು ಕೊಡಬೇಕಿತ್ತು. ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಹಕ್ಕನ್ನು ಕಳೆದುಕೊಂಡಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಂಡು ತನ್ನ ಕೈ ಕೆಳಗಿರುವ ಅಧಿಕಾರಿಗಳಿಗೆ ತನಿಖೆ ನಡೆಸಿ ಎಂದು ಹೇಳಿದರೆ ಹೇಗೆ ತನಿಖೆ ನಡೆಯುತ್ತದೆ. ಆದ್ದರಿಂದ ತಕ್ಷಣವೆ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು

ಮುಂದುವರಿದು ಮಾತನಾಡಿದ ಅವರು ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಇಡೀ ರಾಜ್ಯಕ್ಕೆ ಒಳ್ಳೆಯದಾಗುತ್ತದೆ. ಪ್ರಸ್ತುತ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು. ಇದೇ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡಿದ ಕೊಡುಗೆಯಾಗಿದೆ. ಗ್ಯಾರಂಟಿ ಯೋಜನೆ ಹೆಸರಲ್ಲಿ ರಾಜ್ಯದ ಅಭಿವೃದ್ದಿ ಕಾರ್ಯವೇ ನಿಂತು ಹೋಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೇವಲ ಹಗರಣಗಳೆ ಸದ್ದು ಮಾಡುತ್ತಿವೆ ಎಂದು ಹೇಳಿದರು.

 

RELATED ARTICLES

Related Articles

TRENDING ARTICLES