Sunday, October 6, 2024

ಪೋಲಿಸರ ನಿರ್ಲಕ್ಷವನ್ನೇ ಬಂಡವಾಳ ಮಾಡಿಕೊಂಡ ದುಷ್ಕರ್ಮಿಗಳು : ಹೆಚ್ಚಾದ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರು : ನಗರದಲ್ಲಿ ಕೆಲ ಕಿಡಿಗೇಡಿಗಳಿಂದ ಬಾಂಬ್ ಬೆದರಿಕೆ ಸಂದೇಶಗಳು ಹೆಚ್ಚಾಗಿದ್ದು. ಇದರಿಂದಾಗಿ ಶಿಕ್ಷಣ ಕ್ಷೇತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಸಾರ್ವಜನಿಕರು ಸರ್ಕಾರ ಮತ್ತು ಪೋಲಿಸರ ಮೇಲೆ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಶೈಕ್ಷಣಿಕ ಕೇಂದ್ರಗಳ ಮೇಲೆ ಹುಸಿ ಬಾಂಬ್ ಬೆದರಿಕೆ ಸಂದೇಶಗಳೇನು ಹೊಸತಲ್ಲ ಆದರೆ ಕೆಲ ವಾರಗಳಿಂದ ಬೆಂಗಳೂರಿನ ಶಿಕ್ಷಣ ಸಂಸ್ಥೆಗಳನ್ನು ಸೇರಿದಂತೆ ಅನೇಕ ಸ್ಥಳಗಳಲ್ಲಿ ಬಾಂಬ್ ಇಟ್ಟಿದ್ದೇವೆ ಎಂದು ಬೆದರಿಕೆ ಸಂದೇಶಗಳು ಹೆಚ್ಚಾಗಿವೆ.

ಇತ್ತೀಚೆಗೆ ಬೆಂಗಳೂರಿನ ಪ್ರತಿಷ್ಟಿತ ಕಾಲೇಜುಗಳಾದ BMS, BIT ಮತ್ತು MS ರಾಮಯ್ಯ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದವು. ಅದಕ್ಕು ಮುಂಚೆ ಬೆಂಗಳೂರಿನ ಐಶಾರಾಮಿ ಹೋಟಲ್​ ಎಂದೇ ಹೆಸರಾಗಿರುವ ತಾಜ್ ವೆಸ್ಟ್ ಎಂಡ್ ಹೋಟೆಲಿಗು ಇದೆ ರೀತಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆದರೆ ಇವುಗಳೆಲ್ಲ ಹುಸಿ ಬಾಂಬ್ ಬೆದರಿಕೆ ಎಂದು ಪೋಲಿಸರ ತನಿಖೆಯಲ್ಲಿ ಗೊತ್ತಾಗಿದೆ.

ಆದರೆ ಇಂತಹ ಹುಸಿ ಬಾಂಬ್ ಸಂದೇಶಗಳು ಬಂದಾಗ ಪೋಲಿಸರು, ಬಾಂಬ್ ನಿಷ್ಕ್ರಿಯ ದಳ, ಅಗ್ನಿಶಾಮಕ ದಳದವರು ಬಂದು ಸ್ಥಳ ಪರಿಶೀಲನೆ ನಡೆಸಿ ಬಾಂಬ್ ಇಲ್ಲ ಎಂದು ಖಚಿತ ಪಡಿಸಿದ್ದು ಬಿಟ್ಟರೆ ಆ ಬಾಂಬ್ ಬೆದರಿಕೆ ಸಂದೇಶ ಕಳಿಸಿದವರಾರು, ಯಾಕೆ ಕಳುಹಿಸಿದರು ಎಂಬ ಬಗ್ಗೆ ಯಾವುದೇ ಮಾಹಿತಿ ಗೃಹ ಇಲಾಖೆಯ ಬಳಿಯಿಲ್ಲ.

ಪೋಲಿಸರ ಈ ನಿರ್ಲಕ್ಷವನ್ನೆ ಬಂಡವಾಳ ಮಾಡಿಕೊಂಡಿರುವ ದುಷ್ಕರ್ಮಿಗಳು ವಾರಕೊಮ್ಮೆ ಇಂತಹ ಸಂದೇಶ ಕಳುಹಿಸುತ್ತಿದ್ದು. ಇದರಿಂದಾಗಿ ಶೈಕ್ಷಣಿಕ ಚಟುವಟಿಕೆಯ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪೋಲಿಸರು ಸಹ  ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸದೆ ಇರುವುದರಿಂದ ಶಿಕ್ಷಣ ಸಂಸ್ಥೆಗಳು ಸರ್ಕಾರದ ವಿರುದ್ಧ ಅತೃಪ್ತಿ ಹೊಂದಿವೆ.

ಇಂತಹ ಹುಸಿ ಬಾಂಬ್ ಸಂದೇಶಗಳಿಗೆ ತಾರ್ಕಿಕ ಅಂತ್ಯ ದೊರೆಯದೆ ಇರುವುದರಿಂದ. ದಿನದಿಂದ ದಿನಕ್ಕೆ ಇಂತಹ ಸಂದೇಶಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಶಿಕ್ಷಣ ಕ್ಷೇತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು. ಇದು ವಿಧ್ಯಾರ್ಥಿಗಳ ಭವಿಷ್ಯದ ಮೇಲು ಸಹ ಪರಿಣಾಮ ಬೀರುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES