Wednesday, October 16, 2024

ಅಭಿವೃದ್ದಿಗೆ ಅನುದಾನ ನೀಡುತ್ತಿಲ್ಲ ಎಂದು ಕ್ಷೇತ್ರದ ಜನರ ಮುಂದೆ ಅಳಲು ತೋಡಿಕೊಂಡ MLA ರಾಜುಕಾಗೆ

ಚಿಕ್ಕೋಡಿ : ಸ್ವಪಕ್ಷದವರ ವಿರುದ್ಧವೆ ಶಾಸಕ ರಾಜು ಕಾಗೆ ಹರಿಹಾಯ್ದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ತಾವಂಶಿ ಗ್ರಾಮದಲ್ಲಿ ನಡೆದಿದೆ. ಸರ್ಕಾರ ರೈತರ ಪರವಾಗಿ ಯಾವುದೇ ಯೋಜನೆಗಳನ್ನು ಕೈಗೊಂಡಿಲ್ಲ ಎಂದು ಸ್ವಪಕ್ಷದ ವಿರುದ್ಧವೆ ವಾಗ್ದಾಳಿ ನಡೆಸಿದರು.

ರೈತರ ಪರ ಯಾವುದೇ ಯೋಜನೆಗಳು ಬರ್ತಿಲ್ಲ. ರೈತರು ಬದುಕು ನಡೆಸುವುದು ದುಸ್ತರವಾಗಿದೆ ಒಂದು ವೇಳೆ ರೈತರು ಒಂದು ವರ್ಷ ಬೆಳೆಗಳನ್ನು ಬೆಳೆಯುವುದನ್ನು ಬಿಟ್ಟರೇ ನೀವೇನು ತಿಂತಿರೀ..?ನಿಮ್ಮ ಬಳಿ ರೊಕ್ಕ, ಬಂಗಾರ ಬೆಳ್ಳಿ ಸಾಕಷ್ಟು ಇರಬಹುದು, ಆದ್ರೆ ಅದನ್ನ ತಿನ್ನೋಕಾಗುತ್ತಾ..? ಎಂದು ಪ್ರಶ್ನಿಸಿದರು. ಮೊದಲು ರೈತರನ್ನು ಬದುಕಿಸುವ ಕೆಲಸ ಮಾಡಿ. ರೈತರು ಬದುಕಿದ್ರೆ ಮಾತ್ರ ಈ ದೇಶ ಪ್ರಗತಿ ಹೊಂದಲು ಸಾಧ್ಯವಿದೆ. ಕಳೆದ ಒಂದು ವರ್ಷದಿಂದ ನನ್ನ ಗೋಳನ್ನು ಸರ್ಕಾರ ಆಲಿಸುತ್ತಿಲ್ಲ.ಹೀಗೆ ಪರಿಸ್ಥಿತಿ ಮುಂದುವರೆದ್ರೆ ವಿಧಾನಸೌಧದಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಓರ್ವ ಮಂತ್ರಿಗೆ ಹೇಳಿದೆ. ಎಂದು ಸರ್ಕಾರ ಅಭಿವೃದ್ದಿಗೆ ಅನುದಾನ ನೀಡುತ್ತಿಲ್ಲ ಎಂದು ತಮ್ಮ ಅಳಲು ತೋಡಿಕೊಂಡರು.

ಮುಂದುವರಿದು ಮಾತನಾಡಿದ ಶಾಸಕ ರಾಜುಕಾಗೆ, ನಾವೇನು ವಿಧಾನಸೌಧಕ್ಕೆ ಹೋಗಿ ಖಾಲಿ ಕುಂತಿಲ್ಲ, ಚೈನಿ(ಮೋಜು, ಮಸ್ತಿ) ಮಾಡ್ತಿಲ್ಲ.ರೈತರ ಕಷ್ಟ ಸುಖಗಳನ್ನು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡ್ತಿದ್ದೇನೆ.ಆದರೆ ಸರ್ಕಾರದವರು ನಮಗೆ ಸ್ಪಂದನೆ ಮಾಡ್ತಿಲ್ಲ ಎಂದು ಸಿದ್ದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಾಸಕ‌ ಕಾಗೆ.

ನಾನು ಬೇಕಾದರೆ ನಾಳೆಯೇ ಹೋಗಿ ರಾಜೀನಾಮೆ ಕೊಡ್ತಿನಿ ಏತಕ್ಕಾಗಿ ನಾವು ಎಂಎಲ್‌ಎ ಗಳಾಗಿರಬೇಕು, ಏತಕ್ಕಾಗಿ ನಾವು ಅಧಿಕಾರದಲ್ಲಿಬೇಕು.ಆಡಳಿತ ಪಕ್ಷದ ಒಬ್ಬ ಶಾಸಕನಾಗಿ ಅಸಹಾಯಕತೆ ಬಗ್ಗೆ ಹೇಳ್ತಾ ಇದ್ದೀನಿ ಅಂದ್ರೆ ಎಷ್ಟರಮಟ್ಟಿಗೆ ಈ ವ್ಯವಸ್ಥೆಯಲ್ಲಿ ಬದುಕಿದ್ದೇವೆ ಎಂದು ಅರ್ಥ ಮಾಡ್ಕೊಳ್ಳಿ . ಕಾಂಗ್ರೆಸ್ ಸರ್ಕಾರದ ನಡೆಯಿಂದಾಗಿ ನನ್ನ ಮನಸ್ಸಿಗೆ ಬಹಳ ನೋವಾಗಿದೆ. ಹೀಗಾಗಿ ಮುಂದಿನ ಸಲ ನನಗೆ ಎಂಎಲ್ಎ ಆಗುವುದು ಬೇಕಾಗಿಲ್ಲಎಂದು ಶಾಸಕ ರಾಜುಕಾಗೆ ಕ್ಷೇತ್ರದ ಜನತೆ ಮುಂದೆ ತಮ್ಮ ಅಸಹಾಯಕತೆ ತೊಡಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES