ತುಮಕೂರು : ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಾಮಗೊಂಡನಹಳ್ಳಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗೆ ಕರೋನಾ ಸೋಂಕು ಇದೆ ಎಂಬ ಮಾಹಿತಿ ತಿಳಿದು ಸಾರ್ವಜನಿಕರು ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ, ಅಷ್ಟೇ ಅಲ್ಲದೇ ಕ್ವಾರಂಟೈನ್ ನಲ್ಲಿರುವ ವಿದ್ಯಾರ್ಥಿ ಪರೀಕ್ಷೆಗೆ ಬಂದರೆ ನಮ್ಮ ಮಕ್ಕಳಿಗೆ ಎಲ್ಲಿ ಕರೋನಾ ಬಂದು ಬಿಡುತ್ತೋ ಎಂಬ ಆತಂಕ ಕೂಡ ಮನೆ ಮಾಡಿದೆ. ಸದ್ಯ ಈ ಬಗ್ಗೆ ಪವರ್ ಟಿವಿಗೆ ದೂರವಾಣಿ ಮೂಲಕ ಸ್ಪಷ್ಟಣೆ ನೀಡಿರುವ ಮಧುಗಿರಿ ಡಿಡಿಪಿಐ ರೇವಣ್ಣ ಸಿದ್ದಯ್ಯ ಕ್ವಾರಂಟೈನ್ ನಲ್ಲಿರುವ ಯಾವುದೇ ವಿದ್ಯಾರ್ಥಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ, ಪೋಷಕರು ಆತಂಕ ಪಡುವ ಅಗತ್ಯ ವಿಲ್ಲ ಮುಂದಿನ ದಿನಗಳಲ್ಲಿ ಅವರಿಗೆ ಪ್ರೇಷರ್ ಆಗಿಯೇ ಪರೀಕ್ಷೆ ನೀಡಲಾಗುವುದು ಈ ಬಗ್ಗೆ ಪೊಷಕರು ಆತಂಕ ಪಡುವ ಅಗತ್ಯವಿಲ್ಲ ಎಂದರು.
ಹೇಮಂತ್ ಕುಮಾರ್. ಜೆ.ಎಸ್ ಪವರ್ ಟಿವಿ ತುಮಕೂರು.