Friday, November 22, 2024

ಪೋಲಿಸರು ಸ್ವತಂತ್ರವಾಗಿ ಕೆಲಸ ಮಾಡಲು ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರ : ಪೊಲೀಸ್ ಸಂಸ್ಮರಣಾ ದಿನಾಚರಣೆ ಹಿನ್ನಲೆ ಚಾಮರಾಜಪೇಟೆಯ ನಗರ ಸಶಸ್ತ್ರ ಮೀಸಲು ಪಡೆಯ ಕೇಂದ್ರ ಸ್ಥಾನದಲ್ಲಿ ನಡೆದ ಕಾರ್ಯಕ್ರಮ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ ಜಿ ಪರಮೇಶ್ವರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದರು.

ಈ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ ಎಂದು ಹೇಳಿದರು.

ಇದಕ್ಕಾಗಿ ಮುಂದಿನ ವರ್ಷ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2 ಸಾವಿರ ಕೋಟಿ ನೀಡಿದ್ದೇವೆ.
200 ಕೋಟಿ ವೆಚ್ಚದಲ್ಲಿ 100 ಹೊಸ ಪೋಲಿಸ್ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತಿದೆ. ನಾವು ಮತ್ತು ನಮ್ಮ ಸರ್ಕಾರ ಪೋಲಿಸರ ಹಿತರಕ್ಷಣೆಗೆ ಬದ್ದವಾಗಿದೆ ಎಂದು ಹೇಳಿದರು.

ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ
ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ.ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ ಕಾಪಾಡುವ ಹೊತ್ತಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ. ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ, ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು ಎಂದು ಹೇಳಿದರು.

ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ.ಈ ಶೋಷಿತರ ಸಂವಿಧಾನ ಬದ್ದವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು.ಇವರ ಜೊತೆಗೆ ಸರ್ಕಾರ ಇರುತ್ತದೆ.
ಅಪರಾಧ ತಡೆಯಲು 6 ಸಾವಿರ ಸಿಸಿ ಕ್ಯಾಮರಾಗಳು, 260 ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಸಿದ್ದರಾಮಯ್ಯ ಹೇಳಿದರು.

RELATED ARTICLES

Related Articles

TRENDING ARTICLES