ಬೆಳಗಾವಿ : ಸರ್ಕಾರಿ ಬಸ್ಗಳಲ್ಲಿ ಹಲ್ಲೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ಇದೀಗ ಬಸ್ನಲ್ಲಿ ಸೀಟ್ಗಾಗಿ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಶಕ್ತಿ ಯೋಜನೆಯಿಂದ ಮಹಿಳೆಯರು ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಇದರಿಂದಾಗಿ ಸರ್ಕಾರಿ ಬಸ್ಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದಾಗಿ ಬಸ್ಗಳಲ್ಲಿ ಕುಳಿತು ಕೊಳ್ಳವ ಸೀಟಿಗಾಗಿ ಜಗಳಗಳ ಪ್ರಮಾಣವು ಹೆಚ್ಚಾಗುತ್ತಿದೆ. ಅದೇ ರೀತಿಯಾಗಿ ಬೆಳಗಾವಿ ಬಸ್ನಲ್ಲಿ ಸೀಟಿಗಾಗಿ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿದ್ದಾರೆ.
ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮದೇವಿ ದರ್ಶನಕ್ಕೆ ಬಂದಿದ್ದ ಮಹಿಳೆಯರು ವಾಪಾಸು ಹೋಗುವ ಸಮಯದಲ್ಲಿ ಘಟನೆ ನಡೆದಿದೆ. ಬಸ್ನಲ್ಲಿ ಸೀಟುಗಳು ಪುಲ್ ಆದ ಹಿನ್ನಲೆ. ಸೀಟಿಗಾಗಿ ಮಹಿಳೆಯರ ನಡುವೆ ಜಗಳವಾಗಿ ಜಗಳ ತಾರಕಕ್ಕೆ ಹೋಗಿ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಮೊದಲಿಗೆ ಪರಸ್ಪರ ಬೈದಾಡಿಕೊಂಡ ಮಹಿಳೆಯರು ನಂತರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿದ್ದಾರೆ. ಸದ್ಯ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.