ದೆಹಲಿ : ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್ ಖನ್ನಾ ನೇಮಕ, ನವೆಂಬರ್ 11 ರಂದು ಪ್ರಮಾಣವಚನ ಸ್ವೀಕರಿಸಲಿದ್ದು.ನ್ಯಾ.ಸಂಜೀವ್ ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಸಿಜೆಐ ಡಿ ವೈ ಚಂದ್ರಚೂಡ್ ನೇಮಕ ಮಾಡಿದ್ದಾರೆ.
ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದ ಕೆಲವು ದಿನಗಳ ನಂತರ ರಾಷ್ಟ್ರಪತಿಗಳು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ. ನೇಮಕಾತಿ ನವೆಂಬರ್ 11 ರಿಂದ ಜಾರಿಗೆ ಬರಲಿದೆ. ನ್ಯಾಯಮೂರ್ತಿ ಚಂದ್ರಚೂಡ್ ನವೆಂಬರ್ 8, 2022 ರಂದು ಸಿಜೆಐ ಆಗಿ ಅಧಿಕಾರ ವಹಿಸಿಕೊಂಡರು.CJI ಚಂದ್ರಚೂಡ್ ಅವರ ಅವಧಿ ನವೆಂಬರ್ 10, 2024 ರಂದು ನಿವೃತ್ತರಾಗಲಿದ್ದಾರೆ.
ನ್ಯಾಯಮೂರ್ತಿ ಖನ್ನಾ ಭಾರತದ 51ನೇ CIಆಗಿರುತ್ತಾರೆ ಮತ್ತು 65 ನೇ ವಯಸ್ಸಿನಲ್ಲಿ ಅಂದರೆ ಮೇ 13, 2025 ರಂದು ನಿವೃತ್ತರಾಗುತ್ತಾರೆ. ಇವರು ಮೊದಲು ಆರು ತಿಂಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.”ಭಾರತದ ಸಂವಿಧಾನ ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು, ಭಾರತದ ಗೌರವಾನ್ವಿತ ಮುಖ್ಯ ನ್ಯಾಯಾಧೀಶರೊಂದಿಗೆ ಸಮಾಲೋಚಿಸಿದ ನಂತರ, ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಜಸ್ಟೀಸ್ ಸಂಜೀವ್ ಖನ್ನಾ ಅವರನ್ನು ನವೆಂಬರ್ 11, 2024 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.