ಕಲಬುರಗಿ : ಜಿಲ್ಲೆಯೆ ಬಬಲಾದ ಗ್ರಾಮದ ಹೊರವಲಯದಲ್ಲಿ ರುಂಡವಿಲ್ಲದ ಮುಂಡ ಪತ್ತೆಯಾಗಿದ್ದು. ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿ ಶವವನ್ನು ಬಿಸಾಡಿ ಹೋಗಿದ್ದಾರೆ. ಹತ್ಯೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ಪೋಲಿಸರು ಮಾಹಿತಿ ನೀಡಿದ್ದು. ಕಲಬುರಗಿ ಸಬ್ ಅರ್ಬನ್ ಪೋಲಿಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ ತಾಲೂಕಿನ ಬಬಲಾದ ಗ್ರಾಮದಲ್ಲಿ ಕೃತ್ಯ ನಡೆದಿದ್ದು. ಬರ್ಬರವಾಗಿ ಕೊಲೆ ಮಾಡಿ ನಂತರ ರುಂಡ-ಮುಂಡವನ್ನು ಬೇರ್ಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಲಬುರಗಿ ನಗರ ಪೋಲಿಸ್ ಆಯುಕ್ತ ಶರಣಪ್ಪ ತಮ್ಮ ಸಿಬ್ಬಂದಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಕೊಲೆಯಾಗಿರುವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಆದರೆ ರಾತ್ರಿಯೆಲ್ಲಾ ಕುಡಿದು ಪಾರ್ಟಿ ಮಾಡಿ ನಂತರ ಕೊಲೆ ಮಾಡಿರಬಹುದು ಎಂದು ಅನುಮಾನ ವ್ಯಕ್ತ ಪಡಿಸಿದ್ದಾರೆ.