ಬೆಂಗಳೂರು : ರಾಜಧಾನಿಯಲ್ಲಿ ನಡೆಯುತ್ತಿರುವ ಅತಿ ದೊಡ್ಡ ಟೆಕ್ ಶೃಂಗಸಭೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದು. ಇಂದಿನಿಂದ(ನ.19) ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ಸರ್ಕಾರ ಹಾಗೂ ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ ಆಫ್ ಇಂಡಿಯಾ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು. ಬೆಂಗಳೂರು ಟೆಕ್ ಸಮ್ಮಿಟ್ಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ರ್ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಪ್ರಿಯಾಂಕ ಖರ್ಗೆ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ದೊರೆತಿದೆ.
ಬೆಂಗಳೂರು ಟೆಕ್ ಸಮ್ಮಿಟ್ ನ ಮುಖ್ಯಾಶಗಳು..
- ಸ್ಟಾರ್ಟ್ಅಪ್ ಬೆಳವಣಿಗೆಗೆ ಉತ್ತೇಜನ ನೀಡುವ ವೇದಿಕೆಯಾಗಿದೆ.
- ಸ್ಟಾರ್ಟ್ಅಪ್ ಕಾನ್ಕ್ಲೇವ್- ಪ್ರಖ್ಯಾತ ಡಿಜಿಟಲ್ ಕಥೆಗಾರ ಮತ್ತು ನಾಸ್ ಡೈಲಿಯ ಸಂಸ್ಥಾಪಕ ನುಸೇರ್ ಯಾಸಿನ್ ಅವರಿಂದ ಕಾರ್ಯಕ್ರಮ
- ಉತ್ಪನ್ನ ಲಾಂಚ್ ಅರೆನಾ- 30ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ 50ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳಿಗಾಗಿ ಲಾಂಚ್ಪ್ಯಾಡ್