ಉಷ್ಣಾಂಶವು ಸಾಮಾನ್ಯ ಮಟ್ಟಕ್ಕಿಂತ ಕಡಿಮೆಯಾಗುವುದಕ್ಕೆ ಲಾ-ನಿನೋ ಎಂದು ಕರೆಯುತ್ತಾರೆ. ಲಾ-ನಿನೋ ಪರಿಸ್ಥಿತಿಯಿದಾಗಿ ನವೆಂಬರ್ ಅಂತ್ಯದಿಂದ ಡಿಸೆಂಬರ್‌ವರೆಗೂ ಅಧಿಕ ಚಳಿ ಇರಲಿದ್ದು.ಈ ಚಳಿಯ ಅನುಭವ ಜನವರಿಯಿಂದ ಮಾರ್ಚ್‌ವರೆಗೂ ಕೂಡ ಮುಂದುವರೆಯುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ ಹಾಗೂ ಜನವರಿಯಲ್ಲಿ 8ರಿಂದ 10ಡಿಗ್ರಿ ಇರುವ ಸಾಧ್ಯತೆ ಇದ್ದು.ಬೆಂಗಳೂರಿನಲ್ಲಿ ಡಿಸೆಂಬರ್ ಹಾಗೂ ಜನವರಿಯಲ್ಲಿ 12ರಿಂದ 14ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎನ್ನಲಾಗಿದೆ.ಚಳಿಗಾಲದಲ್ಲಿ ನಸುಕಿನ ಜಾವ 4 ಗಂಟೆಯಿಂದ ಬೆಳ್ಳಗೆ 8ಗಂಟೆಯವರೆಗೂ ಶೀತದ ವಾತವರಣ ಇರಲಿದ್ದು. ಆರೋಗ್ಯದ ಮೇಲೂ ಸಹ ಪರಿಣಾಮ ಬೀರಲಿದ್ದು ಶೀತ -ಜ್ವರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.