Thursday, November 21, 2024

ಬೆಂ-ಮೈ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿಯೆ ನಡೆಯಲಿದೆ 87ನೇ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 58 ಎಕರೆ ಜಾಗವನ್ನು ಗುರುತಿಸಿದ್ದು.
ಬೆಂ-ಮೈ ಹೆದ್ದಾರಿ ಪಕ್ಕದಲ್ಲೇ ಸಾಹಿತ್ಯ ಸಮ್ಮೇಳನದ ಸ್ಥಳ ನಿಗದಿಯಾಗಿದೆ ಎಂದು ಮಾಹಿತಿ ದೊರೆತಿದೆ. ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಸಿದ್ದತೆಗಳು ಆರಂಭವಾಗಿದೆ.

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿ.20ರಿಂದ ಮೂರು ದಿನಗಳ ಕಾಲ ನಡೆಯಲಿದ್ದು.ಸಾಹಿತ್ಯ ಸಮ್ಮೇಳನದ ಸ್ಥಳವನ್ನು ಜಿಲ್ಲಾಡಳಿತ ಅಂತಿಮಗೊಳಿಸಿದ. ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ವಿಶಾಲ ಜಾಗವನ್ನು ಗುರುತಿಸಿದ್ದು. ತಾಂತ್ರಿಕ ಸಮಿತಿ ನೀಡಿದ ವರದಿಯ ಮೇಲೆ ಸ್ಥಳವನ್ನು ನಿಗದಿ ಮಾಡಲಾಗಿದೆ.

ಡಿ.20, 21, 22 ರಂದು ಮಂಡ್ಯದಲ್ಲಿ ಅದ್ದೂರಿಯಾಗಿ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದ್ದು. ಬೆಂ-ಮೈ ರಾಷ್ಟ್ರೀಯ ಹೆದ್ದಾರಿಯ ಸಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೊಟೆಲ್‌ ಹಿಂಭಾಗದ ವಿಶಾಲ ಜಾಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಧಿಕಾರಿ ಮತ್ತು ಶಾಸಕ  ಪಿಎಂ ನರೇಂದ್ರ ಸ್ವಾಮಿ ಸ್ಥಳ ಪರಿಶಿಲನೆ ನಡೆಸಿದ್ದು. ಎಲ್ಲಾ ಸಿದ್ದತೆಗಳು ಭರದಿಂದ ಆರಂಭವಾಗಿದೆ.

ಸುಮಾರು 58 ಎಕರೆ ವಿಶಾಲವಾದ ಜಾಗದಲ್ಲಿ ಸಾಹಿತ್ಯ ಸಮ್ಮೇಳನದ ವೇದಿಕೆ ಸಿದ್ದವಾಗಲಿದ್ದು. ಆನ್​ಲೈನ್​​ನಲ್ಲಿ ನೋಂದಣಿಗೆ 600 ರೂಪಾಯಿಗಳನ್ನು ನಿಗದಿ ಮಾಡಲಾಗಿದೆ. ಆನ್​ಲೈನ್ ನಲ್ಲಿ ನೋಂದಣಿಯಾಗುವವರಿಗೆ ವಸತಿ ಸೌಲಭ್ಯ, ಗುರುತಿನ ಚೀಟಿ ವ್ಯವಸ್ಥೆ ಮಾಡಿದ್ದು. ನೋಂದಣಿಯಾದವರ ಮೊಬೈಲ್​ಗೆ ಎಲ್ಲಾ ಮಾಹಿತಿ ದೊರೆಯಲಿದೆ ಎಂದು ಮಾಹಿತಿ ದೊರೆತಿದೆ. ಈಗಾಗಲೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ. ಸಾಹಿತ್ಯ ಸಮ್ಮೇಳನಕ್ಕೆ ಬರುವ ಕನ್ನಡಿಗರಿಗೆ ಒಳ್ಳೆಯ ವಾತಾವರಣದ ವ್ಯವಸ್ಥೆ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಮಾಹಿತಿ ದೊರತಿದೆ.

RELATED ARTICLES

Related Articles

TRENDING ARTICLES