ಮುಂಬೈ : ಮಹಾರಾಷ್ಟ್ರದಲ್ಲಿ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಪಕ್ಷದವರನ್ನೇ ಆಯ್ಕೆ ಮಾಡುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ(RSS) ಮುಖಂಡರು ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ. ದೇಶದ ಶ್ರೀಮಂತ ರಾಜ್ಯ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ ಮೂರನೇ ಎರಡರಷ್ಟು ಸ್ಥಾನಗಳನ್ನು ಗಳಿಸಿ ಪ್ರಚಂಡ ದಿಗ್ವಿಜಯ ಸಾಧಿಸಿದೆ. ಇದರ ಬೆನ್ನಲ್ಲೇ ರಾಜ್ಯದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಈ ಬಾರಿ ಮುಖ್ಯಮಂತ್ರಿ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿ ಹಾಗೂ ಅದಕ್ಕೂ ಮೊದಲು ವಿರೋಧ ಪಕ್ಷದ ನಾಯಕರಾಗಿ ಅನುಭವ ಉಳ್ಳವರಾಗಿದ್ದಾರೆ. ಸದ್ಯ ಮುಖ್ಯಮಂತ್ರಿ ಆಗಿರುವ ಏಕನಾಥ ಶಿಂದೆ ಅಲ್ಲದೆ, ಉಪ ಮುಖ್ಯಮಂತ್ರಿಯಾಗಿರುವ ಎನ್‌ಸಿಪಿಯ ಅಜಿತ್ ಪವಾರ್ ಅವರು ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ.
ದೇವೇಂದ್ರನೋ? ಏಕನಾಥನೋ? ಕುರ್ಚಿ ಮೇಲೆ ಅಜಿತ್ ಪವಾರ್‌ಗೂ ಕಣ್ಣು!
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ ಮಹಾಮೈತ್ರಿಕೂಟವು 288 ಬಲದ ಸದನದಲ್ಲಿ 234 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಇದರ ನಡುವೆ ನಾಳೆ ಮಹಾರಾಷ್ಟ್ರ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎನ್ನಲಾಗಿದ್ದು, ಈಗ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದರ ಮೇಲೆ ಜನರ ಗಮನ ನೆಟ್ಟಿದೆ.
ಏಕನಾಥ್ ಶಿಂಧೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರಾ ಅಥವಾ ಮಹಾಮೈತ್ರಿಕೂಟದಲ್ಲಿ ದೇವೇಂದ್ರ ಫಡ್ನವಿಸ್ ಅವರಿಗೆ ಅಧಿಕಾರ ನೀಡುತ್ತಾರಾ ಎಂಬತ್ತ ಇಡೀ ದೇಶದ ಗಮನ ನೆಟ್ಟಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ ಮಹಾಮೈತ್ರಿಕೂಟವು 288 ಬಲದ ಸದನದಲ್ಲಿ 234 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಆದ್ದರೊಂದಿಗೆ ಮಹಾಮೈತ್ರಿಕೂಟದಲ್ಲಿ ಮುಖ್ಯಮಂತ್ರಿಯ ಚರ್ಚೆ ನಡೆಯುತ್ತಿದ್ದು, ನಾಳೆ ಮೂರು ಪಕ್ಷಗಳ ನೂತನ ಶಾಸಕರ ಸಭೆ ಕರೆಯಲಾಗಿದೆ.
ಇದರೊಂದಿಗೆ ನಾಳೆ ಮಹಾರಾಷ್ಟ್ರ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎನ್ನಲಾಗಿದ್ದು, ಈಗ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದರ ಮೇಲೆ ಜನರ ಗಮನ ನೆಟ್ಟಿದೆ. ಏಕನಾಥ್ ಶಿಂಧೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರಾ ಅಥವಾ ಮಹಾಮೈತ್ರಿಕೂಟದಲ್ಲಿ ದೇವೇಂದ್ರ ಫಡ್ನವಿಸ್ ಅವರಿಗೆ ಅಧಿಕಾರ ನೀಡುತ್ತಾರಾ ಎಂಬತ್ತ ಇಡೀ ದೇಶದ ಗಮನ ನೆಟ್ಟಿದೆ. ಇದೆಲ್ಲದರ ನಡುವೆಯೇ ಮಹಾಯುತಿಯ ಮೈತ್ರಿಕೂಟದ ಪಾಲುದಾರರಾದ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ಪಕ್ಷಗಳು ಇಂದು ಮತ್ತು ನಾಳೆ ಚುನಾಯಿತ ಶಾಸಕರೊಂದಿಗೆ ನಿರ್ಣಾಯಕ ಸಭೆಗಳನ್ನು ನಡೆಸುತ್ತಿವೆ.