ಆನೇಕಲ್ : ಮನೆಬಳಕೆಗೆ ಉಪಯೋಗಿಸುತ್ತಿದ್ದ ಸಿಲಿಂಡರ್ ಸ್ಪೋಟಗೊಂಡ ಮನೆಯಲ್ಲಿದ್ದ ಮೂರು ಜನರಿಗೆ ಗಂಭೀರವಾದ ಗಾಯವಾದ ಘಟನೆ ಬೆಂಗಳೂರಿನ ಹೊರವಲಯದಲ್ಲಿ ನಡೆದಿದ್ದು. ಗಾಯಾಳುಗಳನ್ನು ನಾರಾಯಣ ಹೆಲ್ತ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಕಾಚನಾಯಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು. ಇಂದು(ಡಿ.02) ಬೆಳ್ಳಂಬೆಳಿಗ್ಗೆ ಮನೆಯಲ್ಲಿದ್ದ ಸಿಲಿಂಡರ್ ಸ್ಪೋಟಗೊಂಡಿದೆ. ಬೆಳಿಗ್ಗೆ ನಿದ್ದೆಯಿಂದ ಎದ್ದು ಮನೆಯ ಲೈಟ್ ಹಾಕುತ್ತಿದ್ದಂತೆ ಸಿಲಿಂಡರ್ ಸ್ಪೋಟಗೊಂಡಿದ್ದು. ಸ್ಪೋಟದ ತೀವ್ರತೆಗೆ ಮನೆಯ ಕಿಟಕಿ, ಬಾಗಿಲುಗಳು ಪೀಸ್ ಪೀಸ್ ಆಗಿದೆ ಎಂದು ತಿಳಿದು ಬಂದಿದೆ.
ಮನೆಯಲ್ಲಿದ್ದ ಮೂರು ಜನರಿಗೆ ಗಂಭೀರವಾದ ಗಾಯಗಳಾಗಿದ್ದು. ಶೇಕಡಾ 50% ರಷ್ಟು ಸುಟ್ಟಗಾಯಗಳಾಗಿವೆ. ಸುಟ್ಟಗಾಯಗಳಿಂದ ನರಳುತ್ತಿದ್ದವರನ್ನು ನಾರಾಯಣ ಹೆಲ್ತ್ ಆಸ್ಪತ್ರೆಗೆ ದಾಖಲು ಮಾಡಿದ್ದು. ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ದೊರೆತಿದೆ. ಘಟನಾ ಸ್ಥಳಕ್ಕೆ ಸೂರ್ಯಸಿಟಿ ಪೋಲಿಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮಾಹಿತಿ ದೊರೆತಿದೆ.