Thursday, December 5, 2024

ಡಿ.7ರಂದು World Buntara Samagama-2024; ಪವರ್​ ಟಿವಿ ಮುಖ್ಯಸ್ಥರಾದ ಶ್ರೀ ರಾಕೇಶ್​ ಶೆಟ್ಟಿಯವರು ಸೇರಿ 12 ಮಂದಿಗೆ ಸಾಧನ ಪ್ರಶಸ್ತಿ

ದಕ್ಷಿಣಕನ್ನಡ, ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈ ಬಂಟರ ಸಂಘದ ಸಹಯೋಗದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ ವಿಶ್ವ ಬಂಟರ ಸಮಾಗಮ” ಬೃಹತ್ ಕಾರ್ಯಕ್ರಮ ಡಿ.7ರಂದು ನಡೆಯಲಿದೆ.

ಕಳೆದ ವರ್ಷ ಉಡುಪಿಯಲ್ಲಿ ಎರಡು ದಿನಗಳ ವಿಶ್ವಮಟ್ಟದ ಬಂಟ ಸಮ್ಮಿಲನವನ್ನು ಆಯೋಜಿಸಿ ಕೊಂಡಿದ್ದು ಸುಮಾರು 75 ಸಾವಿರಕ್ಕೆ ಮಿಕ್ಕಿ ಸಮಾಜ ಬಾಂಧವರು ಪಾಲ್ಗೊಂಡು ಯಶಸ್ವಿಯಾಗಿ ನಡೆದಿದೆ. ಮಂಬೈ ನಗರದಲ್ಲಿ 3 ವರ್ಷಗಳ ಹಿಂದೆ ಒಕ್ಕೂಟದ ಬಂಟ ಸಮ್ಮಿಲನ ಯಶಸ್ವಿಯಾಗಿ ನಡೆದಿದೆ. ಈ ವರ್ಷ ಮುಂಬೈ ಮಹಾ ನಗರದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳನ್ನು ಒಟ್ಟು ಸೇರಿಸುವ ಮಹಾನ್ ಉದ್ದೇಶದೊಂದಿಗೆ ಡಿ.7ರಂದು ಕುರ್ಲಾಪೂರ್ವದ ಬಂಟರ ಭವನದಲ್ಲಿ “ವಿಶ್ವ ಬಂಟರ ಸಮಾಗಮ” ಜಾಗತಿಕ ಮಟ್ಟದ ಕಾರ್ಯಕ್ರಮ ಬೆಳಿಗ್ಗೆಯಿಂದ ಸಂಜೆವರೆಗೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಕಾರ್ಯಕ್ರಮವನ್ನು ಮುಂಬೈ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ, ಮುಖ್ಯ ಅತಿಥಿಯಾಗಿ ಒಕ್ಕೂಟದ ವಿಶೇಷ ಮಹಾ ನಿರ್ದೇಶಕರ. ಆರ್ಗಾನಿಕ್ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ಸಿಎಂಡಿ ತೋನ್ಸೆ ಆನಂದ ಎಮ್.ಶೆಟ್ಟಿ, ಮುಂಬೈ ಹೇರಂಭ ಇಂಡಸ್ಟ್ರೀಸ್ ನ ಅಧ್ಯಕ್ಷ, ಮಹಾದಾನಿ ಕನ್ಯಾನ‌ ಸದಾಶಿವ ಶೆಟ್ಟಿ ಪಾಲ್ಗೊಳ್ಳಲಿದ್ದು ಹಾಗೂ ಪ್ರತಿಷ್ಠಿತ ಉದ್ಯಮಿಗಳು ಸಮಾಜ ಸೇವಕರು ಜಗತ್ತಿನ ವಿವಿಧ ಬಂಟಸಂಘಗಳ ಅಧ್ಯಕ್ಷರು ಸೇರಿಕೊಳ್ಳಲಿದ್ದಾರೆ. ಸಂಜೆ ನಡೆಯಲಿರುವ ಸಮಾರೋಪ ಕಾರ್ಯಕ್ರಮವನ್ನು ಒಕ್ಕೂಟದ ಮಹಾದಾನಿ ಹೇರಂಬ ಇಂಡಸ್ಟ್ರೀಸ್‍ನ ಆಡಳಿತ ನಿರ್ದೇಶಕರಾದ ಕನ್ಯಾನ ಸದಾಶಿವ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಎಮ್ ಆರ್ ಜಿ ಗ್ರೂಪ್ ಆಡಳಿತ ನಿರ್ದೇಶಕ ಡಾ. ಕೆ ಪ್ರಕಾಶ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ ಹಾಗೂ ವಿಶ್ವದ ಬಂಟರ ಸಂಘಗಳ ನೂತನ ಅಧ್ಯಕ್ಷರುಗಳಿಗೆ ಸನ್ಮಾನ ನಡೆಯಲಿದೆ.

ಮುಂಬೈ ಮಹಾನಗರದ ಬಂಟರ ಸಂಘಗಳಿಗೆ ನೃತ್ಯ ಸ್ಪರ್ಧೆ ನಡೆಯಲಿದೆ. ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಕಾರ್ಯಕ್ರಮ ಹೊಸತನ ನೀಡುವಲ್ಲಿ ರೂಪರೇಷೆಯನ್ನು ತಯಾರಿಸಲಾಗಿದೆ. ವಿಶ್ವಬಂಟರ ಸಮಾಗಮದಲ್ಲಿ ಬಂಟ ಸಮಾಜದ ಪ್ರಮುಖರು ಭಾಗವಹಿಸಲಿದ್ದಾರೆ. ವಿಶ್ವದಾದ್ಯಂತ ಇರುವ ಬಂಟರ ಸಂಘಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಗುವುದು.‌ ಸಿನಿಮಾ ತಾರೆಯರು, ಧಾರ್ಮಿಕ‌ ಮುಖಂಡರು, ಉದ್ಯಮಿಗಳು, ರಾಜಕೀಯ ಮುಖಂಡರು, ಕೈಗಾರಿಕೋದ್ಯಮಿಗಳು, ಭಾಗವಹಿಸಲಿದ್ದಾರೆ.

RELATED ARTICLES

Related Articles

TRENDING ARTICLES