ಶ್ರೀನಗರ: ಶ್ರೀನಗರದಲ್ಲಿ ನನ್ನೆ ನಡೆದ ಕಾರ್ಯಕ್ರಮದ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಬೇಕಾಗಿದೆ ಎಂದರು.
ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದಲ್ಲಿ ಹೋರಾಟ ನಡೆಸುವುದಾಗಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸುಳಿವು ನೀಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ. ಶ್ರೀನಗರದಲ್ಲಿ ನನ್ನೆ ನಡೆದ ಕಾರ್ಯಕ್ರಮದ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನ ಮರುಸ್ಥಾಪಿಸಲು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಬೇಕಾಗಿದೆ ಎಂದರು.
ಆಗಸ್ಟ್ 5, 2019 ರಂದು, ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿತು.
ಲೋಕಸಭೆ ಮತ್ತು ಅಸೆಂಬ್ಲಿ ಚುನಾವಣೆಗಳಲ್ಲಿ ರಾಜ್ಯ ಸ್ಥಾನವನ್ನು ಮರುಸ್ಥಾಪಿಸುವ ಬಗ್ಗೆ ಪಿಎಂ ಮೋದಿ ಅವರು ಜಮ್ಮು-ಕಾಶ್ಮೀರ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದರು.
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳೆರಡರಲ್ಲೂ ಜನರು ಯಾವುದೇ ಭಯವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ರಾಜ್ಯಸ್ಥಾನಮಾನ ಮರುಸ್ಥಾಪನೆ ಕುರಿತು ತಮಗೆ ನೀಡಿದ ಭರವಸೆಯನ್ನು ಈಡೇರುವ ಭರವಸೆಯಿಂದ ವಿಧಾನಸಭೆ ಚುನಾವಣೆಯನ್ನು ಜನರು ಯಶಸ್ವಿಗೊಳಿಸಿದ್ದಾರೆ ಎಂದರು.