Monday, December 23, 2024

DCM ಆದ 48 ಗಂಟೆಯೊಳಗೆ ಅಜಿತ್​ ಪವಾರ್​​ಗೆ ಬಿಗ್​ ರಿಲೀಫ್ ಕೊಟ್ಟ ನ್ಯಾಯಾಲಯ !

ಬೆಂಗಳೂರು : ಮಹಾರಾಷ್ಟ್ರದ ನೂತನ ಮಹಾಯುತಿ ಸರ್ಕಾರದಲ್ಲಿ ಗುರುವಾರ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಎನ್‌ಸಿಪಿ ನಾಯಕನಿಗೆ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದೆ. 1,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿ ಪ್ರಕರಣವನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಬಿಜೆಪಿ ನೇತೃತ್ವದ ಮಹಾರಾಷ್ಟ್ರದ ನೂತನ ಮಹಾಯುತಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಆರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರಿಗೆ, ಅಧಿಕಾರ ಸ್ವಿಕರಿಸಿದ 48 ಗಂಟೆಯೊಳಗೆ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದ್ದು, ಅಜಿತ್​​ ಅವರಿಗೆ ಸಂಬಂಧಿಸಿದ 1,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಐಟಿ ಇಲಾಖೆ ಬಿಡುಗಡೆ ಮಾಡಿದೆ.

ಮಹಾರಾಷ್ರ್ಟದ ಬೇನಾಮಿ ಆಸ್ತಿ ವಹಿವಾಟು ತಡೆ ಮೇಲ್ಮನವಿ ನ್ಯಾಯಾಧಿಕರಣವು ಅಜಿತ್ ಪವಾರ್ ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಬೇನಾಮಿ ಆಸ್ತಿ ಮಾಲೀಕತ್ವದ ಆರೋಪಗಳನ್ನು ವಜಾಗೊಳಿಸಿ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ಆದೇಶ ಹೊರಡಿಸಿದೆ. ನ್ಯಾಯಾಲಯದ ಆದೇಶದ ನಂತರ, ಆದಾಯ ತೆರಿಗೆ ಇಲಾಖೆಯು 2021 ರಲ್ಲಿ ವಶಪಡಿಸಿಕೊಂಡಿದ್ದ 1,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಬಿಡುಗಡೆ ಮಾಡಲಾಗಿದೆ.

RELATED ARTICLES

Related Articles

TRENDING ARTICLES